ತಿರುವನಂತಪುರಂ : ಮನೆಯಲ್ಲೇ ನೇಣು ಬಿಗಿದ ಸ್ಥಿತಿಯಲ್ಲಿ ಹಲವಾರು ಚಿತ್ರಗಳಲ್ಲಿ ಹಾಗೂ ಧಾರಾವಾಹಿಗಳಲ್ಲಿ ನಟಿಸಿರುವ ಖ್ಯಾತ ನಟಿ ಅಪರ್ಣಾ ಪಿ.ನಾಯರ್(31) ಅವರ ಮೃತದೇಹ ಪತ್ತೆಯಾಗಿದೆ.
ಗುರುವಾರ ಸಂಜೆ ತಮ್ಮ ನಿವಾಸದಲ್ಲಿ ಪ್ರಜ್ಞಾಹೀನ ಸ್ಥಿತಿಯಲ್ಲಿ ಪತ್ತೆಯಾಗಿದ್ದ ಅಪರ್ಣಾ ಅವರನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.
ಆತ್ಮಹತ್ಯೆಗೆ ಏನು ಕಾರಣ ಎಂಬುದು ತಿಳಿದು ಬಂದಿಲ್ಲ.


























