ವಿಟ್ಲ : ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಕ್ಷೇತ್ರ ಶಿಕ್ಷಣಾಧಿಕಾರಿಯವರ ಕಚೇರಿ ಬಂಟ್ವಾಳ, ಶ್ರೀ ಸತ್ಯಸಾಯಿ ಲೋಕ ಸೇವಾ ಅ.ಹಿ.ಪ್ರಾ. ಶಾಲೆ ವಾಣಿವಿಹಾರ-ಅಳಿಕೆ ಇದರ ಸಂಯುಕ್ತ ಆಶ್ರಯದಲ್ಲಿ ಬಂಟ್ವಾಳ ತಾಲೂಕು ಮಟ್ಟದ ಪ್ರಾಥಮಿಕ ಶಾಲಾ ಬಾಲಕ/ ಬಾಲಕಿಯರ ಕಬಡ್ಡಿ ಪಂದ್ಯಾಟ 2023-24 ಶ್ರೀ ಸತ್ಯಸಾಯಿ ಲೋಕ ಸೇ.ಅ.ಹಿ.ಪ್ರಾ. ಶಾಲೆ ವಾಣಿ ವಿಹಾರದಲ್ಲಿ ನಡೆಯಿತು.

ವಿಟ್ಲ ಸರಕಾರಿ ಪ್ರೌಢಶಾಲೆ (RMSA) ಪ್ರಾಥಮಿಕ ಶಾಲಾ ಬಾಲಕಿಯರ ತಂಡ ಕಬಡ್ಡಿಯಲ್ಲಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದೆ.





























