ಬೆಂಗಳೂರು: ಇಂದು 31,796 ಮಂದಿ ಸೋಂಕಿನಿಂದ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ, ಈವರೆಗೆ 13,51,097 ಮಂದಿ ಗುಣಮುಖರಾದಂತಾಗಿದೆ.
ರಾಜ್ಯದಲ್ಲಿ ಇಂದು 9,828 ರ್ಯಾಪಿಡ್ ಆ್ಯಂಟಿಜೆನ್ ಟೆಸ್ಟ್ ಹಾಗೂ 1,36,663 ಆರ್ಟಿಪಿಸಿಆರ್ ಟೆಸ್ಟ್ಗಳು ಸೇರಿದಂತೆ ಒಟ್ಟು 1,46,496 ಕೊರೊನಾ ಪರೀಕ್ಷೆಗಳನ್ನು ನಡೆಸಲಾಗಿದೆ. ಈ ಪೈಕಿ ಇಂದು 47,930 ಮಂದಿಗೆ ಕೊರೊನಾ ಸೋಂಕಿರುವುದು ದೃಢಪಟ್ಟಿದೆ. ಸದ್ಯ ರಾಜ್ಯದಲ್ಲಿ 5,64,485 ಆ್ಯಕ್ಟಿವ್ ಪ್ರಕರಣಗಳಿವೆ ಎಂದು ಆರೋಗ್ಯ ಇಲಾಖೆಯ ಅಂಕಿ-ಅಂಶಗಳು ಹೇಳುತ್ತಿವೆ.