ಮಂಗಳೂರು: ಜಿಲ್ಲೆಯ 18 ವರ್ಷ ಮೇಲ್ಪಟ್ಟವರಿಗೆ ಲಸಿಕಾ ಅಭಿಯಾನ ಮಂಗಳವಾರದಿ0ದ ಆರಂಭಿಸಲು ಆರೋಗ್ಯ ಇಲಾಖೆ ನಿರ್ಧರಿಸಿದೆ. ಆನ್‌ಲೈನ್ ಮೂಲಕ ನೋಂದಣಿ ಮಾಡಿಕೊಂಡವರಿಗೆ ಮಾತ್ರ ಲಸಿಕೆ ಪಡೆಯಲು ಅವಕಾಶ ನೀಡಲಾಗಿದೆ.
18 ವರ್ಷ ಮೇಲ್ಪಟ್ಟವರಿಗೆ ಲಸಿಕೆ ಪಡೆಯಲು ವೆನ್ಲಾಕ್ ಜಿಲ್ಲಾಸ್ಪತ್ರೆ ಮತ್ತು ಜಿಲ್ಲೆಯ ತಾಲೂಕು ಆಸ್ಪತ್ರೆಗಳಲ್ಲಿ ಮಾತ್ರ ಅವಕಾಶ ಕಲ್ಪಿಸಲಾಗಿದೆ. ಸೋಮವಾರ ಜಿಲ್ಲೆಗೆ ಕೊವಿಶೀಲ್ಡ್ ಲಸಿಕೆ ಬರಲಿದ್ದು, ವೆನ್ಲಾಕ್ ಜಿಲ್ಲಾಸ್ಪತ್ರೆ ಮತ್ತು ಜಿಲ್ಲೆಯ ಎಲ್ಲಾ ತಾಲೂಕು ಆಸ್ಪತ್ರೆಗಳಿಗೆ ಹಂಚಿಕೆ ಮಾಡಲಾಗುತ್ತದೆ. ಲಸಿಕಾ ಕೇಂದ್ರಗಳಲ್ಲಿ ದಿನಕ್ಕೆ 150 ರಿಂದ 170 ಮಂದಿಗೆ ಮಾತ್ರ ಲಸಿಕೆ ಪಡೆದುಕೊಳ್ಳಲು ಅವಕಾಶ ಇರುತ್ತದೆ.
2ನೇ ಹಂತದಲ್ಲಿ ಲಸಿಕೆ ಪಡೆದುಕೊಳ್ಳುವ 45 ರಿಂದ 60 ವರ್ಷ ಮತ್ತು 60 ವರ್ಷ ಮೇಲ್ಪಟ್ಟವರಿಗೆ ಅವಕಾಶ ನೀಡಲಾಗುತ್ತದೆ. ಅವರು ಆನ್‌ಲೈನ್ ಮೂಲಕ ನೋಂದಣಿ ಮಾಡಿಕೊಳ್ಳುವ ಅಗತ್ಯ ಇರುವುದಿಲ್ಲ. ಆದರೆ ಮೊದಲ ಡೋಸ್ ಪಡೆದುಕೊಳ್ಳಲು ಅವಕಾಶ ಇರುವುದಿಲ್ಲ.