Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!

    ಕಡಬದಲ್ಲಿ ಅನುಮಾನಾಸ್ಪದ ಸಾವು: ಆತ್ಮಹತ್ಯೆ ಪ್ರಕರಣ ಇದೀಗ ಮರುವಿಚಾರಣೆಗೆ : ಇಬ್ಬರ ವಿರುದ್ಧ ಪ್ರಕರಣ ದಾಖಲು..!!

    ಬಂಟ್ವಾಳ: ಲಕ್ಷಾಂತರ ರೂ ಮೌಲ್ಯದ ನಿಷೇದಿತ ಎಂ ಡಿ ಎಂ ಎ  ಸಹಿತ ಇಬ್ಬರು ಆರೋಪಿಗಳ ಬಂಧನ..!!!

    ಬಂಟ್ವಾಳ: ಲಕ್ಷಾಂತರ ರೂ ಮೌಲ್ಯದ ನಿಷೇದಿತ ಎಂ ಡಿ ಎಂ ಎ  ಸಹಿತ ಇಬ್ಬರು ಆರೋಪಿಗಳ ಬಂಧನ..!!!

    ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ; ಐವರು ಯುವಕರು ಪಾರು..!!

    ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ; ಐವರು ಯುವಕರು ಪಾರು..!!

    ಮುಂದೆ ಬಾಲವನದಲ್ಲಿ ತಿಂಗಳಿಗೊಂದು ಕಾರ್ಯಕ್ರಮ : ಬಾಲವನ ಅಭಿವೃದ್ಧಿ ಸಮಿತಿಯ ಪ್ರಥಮ ಸಭೆಯ ಬಳಿಕ ಶಾಸಕ ಅಶೋಕ್‌ ಕುಮಾರ್ ರೈ ಹೇಳಿಕೆ..!!

    ಮುಂದೆ ಬಾಲವನದಲ್ಲಿ ತಿಂಗಳಿಗೊಂದು ಕಾರ್ಯಕ್ರಮ : ಬಾಲವನ ಅಭಿವೃದ್ಧಿ ಸಮಿತಿಯ ಪ್ರಥಮ ಸಭೆಯ ಬಳಿಕ ಶಾಸಕ ಅಶೋಕ್‌ ಕುಮಾರ್ ರೈ ಹೇಳಿಕೆ..!!

    ಕ್ಯಾನ್ಸರ್‌ನಿಂದ ಬಳಲುತ್ತಿದ್ದ ಎಸ್ಪಿ ಲಾವಣ್ಯ ಸಾವು..!!

    ಕ್ಯಾನ್ಸರ್‌ನಿಂದ ಬಳಲುತ್ತಿದ್ದ ಎಸ್ಪಿ ಲಾವಣ್ಯ ಸಾವು..!!

    ಮಾಟ : ಮಂತ್ರದ ಹೆಸರಲ್ಲಿ ಬ್ಯೂಟಿಷಿಯನ್ ಮೇಲೆ ಜ್ಯೋತಿಷಿಯಿಂದ ನಿರಂತರ ಅತ್ಯಾಚಾರ..!!

    ಮಾಟ : ಮಂತ್ರದ ಹೆಸರಲ್ಲಿ ಬ್ಯೂಟಿಷಿಯನ್ ಮೇಲೆ ಜ್ಯೋತಿಷಿಯಿಂದ ನಿರಂತರ ಅತ್ಯಾಚಾರ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ಧಾರ್ಮಿಕ

ಬಪ್ಪಳಿಗೆಯ ಅಂಬಿಕಾ ಮಹಾವಿದ್ಯಾಲಯದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆ : ‘ಶ್ರೀಕೃಷ್ಣನ ಪ್ರತಿಯೊಂದು ನಡೆಗಳಲ್ಲೂ ಸಂದೇಶಗಳಿವೆ’ – ತೇಜಶಂಕರ ಸೋಮಯಾಜಿ

September 6, 2023
in ಧಾರ್ಮಿಕ, ಪುತ್ತೂರು
0
ಬಪ್ಪಳಿಗೆಯ ಅಂಬಿಕಾ ಮಹಾವಿದ್ಯಾಲಯದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆ : ‘ಶ್ರೀಕೃಷ್ಣನ ಪ್ರತಿಯೊಂದು ನಡೆಗಳಲ್ಲೂ ಸಂದೇಶಗಳಿವೆ’ – ತೇಜಶಂಕರ ಸೋಮಯಾಜಿ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement
Advertisement

ಪುತ್ತೂರು : ಭಗವಾನ್ ಶ್ರೀಕೃಷ್ಣನನ್ನು ನಾನಾ ನೆಲೆಯಿಂದ ಗುರುತಿಸುತ್ತಾ ಸಾಗುವುದಕ್ಕೆ ಸಾಧ್ಯವಿದೆ. ದುಷ್ಟ ಶಿಕ್ಷಣ, ಶಿಷ್ಟ ರಕ್ಷಣದಿಂದ ತೊಡಗಿ ರಾಜತಾಂತ್ರಿಕ ವಿಚಾರಗಳವರೆಗೆ ಅಷ್ಟೂ
ವಿಷಯಗಳಲ್ಲಿ ಶ್ರೀಕೃಷ್ಣ ನಮಗೆ ಮಾದರಿಯಾಗಿ ಕಾಣಿಸುತ್ತಾನೆ. ಆತನ ಒಂದೊಂದು ನಡೆಯ ಹಿಂದೆಯೂ ಒಂದೊಂದು ಸಂದೇಶಗಳನ್ನು ಅರ್ಥ ಮಾಡಿಕೊಳ್ಳಬಹುದು. ಆದರೆ ಆತ ಕೃತಿಯ ಮೂಲಕ ತೋರಿಸಿದ್ದನ್ನು ಅರ್ಥ ಮಾಡಿಕೊಳ್ಳುವುದಕ್ಕೆ ಅಸಾಧ್ಯರಾದವರು ಆತನನ್ನು ಹೀಗಳೆಯುವ ಮೂಲಕ ತಮ್ಮ ವ್ಯಕ್ತಿತ್ವವನ್ನು ಅನಾವರಣಗೊಳಿಸುತ್ತಿರುವುದನ್ನು ಕಾಣಬಹುದು ಎಂದು ಅಂಬಿಕಾ
ಮಹಾವಿದ್ಯಾಲಯದ ತತ್ವಶಾಸ್ತ್ರ ವಿಭಾಗದ ಮುಖ್ಯಸ್ಥ ವಿದ್ವಾನ್ ತೇಜಶಂಕರ ಸೋಮಯಾಜಿ ಹೇಳಿದರು.

Advertisement
Advertisement

Advertisement

ಅವರು ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಬಪ್ಪಳಿಗೆಯಲ್ಲಿನ ಅಂಬಿಕಾ ಮಹಾವಿದ್ಯಾಲಯದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ ತತ್ವಶಾಸ್ತ್ರ ವಿಭಾಗದ ವತಿಯಿಂದ ಬುಧವಾರ ಆಯೋಜಿಸಲಾದ ಧಾರ್ಮಿಕ ಉಪನ್ಯಾಸ ಕಾರ್ಯಕ್ರಮದಲ್ಲಿ ಮಾತನಾಡಿದರು.

ಗೋಪಿಕೆಯರ ವಸ್ತ್ರಗಳನ್ನು ಅಪಹರಿಸಿದವನು ಎಂದು ಶ್ರೀಕೃಷ್ಣನ ವ್ಯಕ್ತಿತ್ವವನ್ನು ಕಿರಿದಾಗಿಸುವ ಪ್ರಯತ್ನದಲ್ಲಿ ತೊಡಗುವ ಮಂದಿಗೆ ಭಾಗವತ, ಪುರಾಣಗಳ ಅಲ್ಪಜ್ಞಾನವೂ ಇಲ್ಲ ಎಂಬುದು ತಿಳಿದುಬಿಡುತ್ತದೆ. ಆತ ವಸ್ತ್ರಾಪಹಾರ ಮಾಡುವ ಹೊತ್ತಿಗೆ ಕೇವಲ ಆರನೆಯ ವಯಸ್ಸಿನಲ್ಲಿದ್ದ ಹಾಗೂ ಗೋಪಿಕೆಯರು ನಾಲ್ಕು ವರ್ಷ ವಯಸ್ಸಿನವರಾಗಿದ್ದರೆಂಬ ವಿಚಾರ ಭಾಗವತದಲ್ಲಿ ಸ್ಪಷ್ಟ ಉಲ್ಲೇಖವಿದೆ. ಹಾಗಾಗಿ ಆ ವಯಸ್ಸಿನಲ್ಲಿ ಕಾಮದೃಷ್ಟಿಯಿಂದ ಬಟ್ಟೆ ಒಯ್ದ ಎನ್ನುವವರು ತಮ್ಮ ದೃಷ್ಟಿಯ ಬಗೆಗೆ ಆಲೋಚಿಸಬೇಕು. ಅಂತೆಯೇ ನಗ್ನ ಸ್ನಾನ ಹಾಗೂ ವಿನಾ ಕಾರಣ ರಾತ್ರಿ ಸ್ನಾನ ಪರಂಪರೆಯಲ್ಲಿ ನಿಷಿದ್ಧವಾಗಿರುವ ನೆಲೆಯಲ್ಲಿ ಶ್ರೀಕೃಷ್ಣ ಸ್ನಾನಕ್ಕೆ ಅಡ್ಡಿಪಡಿಸಿದ್ದ ಎಂಬುದರ ಕಲ್ಪನೆಯೂ ಟೀಕಿಸುವ ಜನಕ್ಕೆ ತಿಳಿದಿಲ್ಲ ಎಂದರು.

ಶ್ರೀಕೃಷ್ಣ ಹದಿನಾರು ಸಾವಿರ ಮಂದಿಯನ್ನು ವಿವಾಹವಾದ ಎಂದು ಮಾತನಾಡುವವರಿಗೆ ಅದರ ಹಿಂದಿರುವ ವಿಚಾರಗಳ ಕಲ್ಪನೆಯಿಲ್ಲ. ನರಕಾಸುರನ ಬಂಧನದಲ್ಲಿದ್ದ ಅಷ್ಟೂ ಮಂದಿಯನ್ನು ಆ ಕಾಲದಲ್ಲಿ ಸಮಾಜ ನೋಡಬಹುದಾಗಿದ್ದ ಕೀಳು ದೃಷ್ಟಿಯಿಂದ ತಪ್ಪಿಸಲು ಆತ ವಿವಾಹವಾಗಿರುವ ವಿಚಾರ ಶ್ರೀಕೃಷ್ಣನ ಬದುಕನ್ನು ಅಧ್ಯಯನದ ನೆಲೆಯಿಂದ ಕಂಡವರಿಗೆ ವೇದ್ಯವಾಗುತ್ತದೆ. ಮೂರ್ಖರು ಮಾತ್ರ ತಮಗನ್ನಿಸಿದ್ದನ್ನು ಹೇಳುತ್ತಾ ತಿರುಗಾಡುತ್ತಾರೆ. ಹದಿನಾರು ಸಾವಿರ ಮಂದಿಯನ್ನು ಕೇವಲ ವಿಷಯಾಸಕ್ತಿಯ ಕಾರಣಕ್ಕಾಗಿ ವಿವಾಹವಾಗಿದ್ದದ್ದಾದರೆ ಒಬ್ಬೊಬ್ಬರ ಜೊತೆ ಒಂದೊಂದು ದಿನ ಕಳೆಯುವುದಕ್ಕೂ ನಲವತ್ತಮೂರಕ್ಕಿಂತಲೂ ಅಧಿಕ ವರ್ಷಗಳು ಬೇಕಾಗುತ್ತವೆ. ಇದು ವಾಸ್ತವದ ನೆಲೆಯಿಂದ ಸಾಧ್ಯವೇ ಎಂಬುದನ್ನು ಅರ್ಥ ಮಾಡಿಕೊಳ್ಳದಿರುವವರು ತಮ್ಮ ವ್ಯಕ್ತಿತ್ವದ ಬಗೆಗೆ ಅವಲೋಕಿಸಬೇಕು ಎಂದು ನುಡಿದರು.

ರಾಜತಾಂತ್ರಿಕ ನೆಲೆಯಲ್ಲಿ ಶ್ರೀಕೃಷ್ಣನ ಬದುಕು ಸದಾ ವಿಸ್ಮಯಕಾರಿ. ಅರಗಿನ ಅರಮನೆಯಲ್ಲಿ ಪಾಂಡವರು ಸತ್ತರೆಂಬುದನ್ನು ಕೌರವನ ಆಸ್ಥಾನದಲ್ಲಿ ಹೇಳುತ್ತಾ ಬಿಕ್ಕಿ ಬಿಕ್ಕಿ ಅಳುವ ಶ್ರೀಕೃಷ್ಣ ತಾನೂ ಅದನ್ನು ನಂಬಿದವನಂತೆ ವ್ಯವಹರಿಸುತ್ತಾನೆ. ಆದರೆ ದ್ರೌಪದೀ ಸ್ವಯಂವರದ ಕಾಲದಲ್ಲಿ ಅರ್ಜುನ ಮಾತ್ರ ಬೇಧಿಸಬಹುದಾಗಿದ್ದ ಮತ್ಸ್ಯಯಂತ್ರವನ್ನು ಪಣವಾಗಿಡುವುದಕ್ಕೆ ಕಾರಣನಾಗುತ್ತಾನೆ. ಹಾಗಾದರೆ ಅರ್ಜುನ ಸಹಿತವಾಗಿ ಪಾಂಡವರು ಬದುಕಿದ್ದಾರೆಂಬುದನ್ನು ಆತ ಅರಿತಿದ್ದ ಹಾಗೂ ಉದ್ದೇಶಪೂರ್ವಕವಾಗಿಯೇ ಕೌರವನ ಆಸ್ಥಾನದಲ್ಲಿ ಅರಿಯದವರಂತೆ ವ್ಯವಹರಿದ್ದ ಎಂಬುದು ತಿಳಿಯುತ್ತದೆ. ಇದು ಆತನ ರಾಜನೀತಿಯ ನಡೆಯಾಗಿತ್ತೆಂಬುದನ್ನು ಗುರುತಿಸಬೇಕು. ಇಂತಹ ಹಲವು ಘಟನಾವಳಿಗಳು ಅಧ್ಯಯನಾಸಕ್ತರಿಗೆ ಲಭ್ಯವಾಗುತ್ತಾ ಸಾಗುತ್ತದೆ ಎಂದರು.

ಅಧ್ಯಕ್ಷತೆ ವಹಿಸಿದ್ದ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಸುಬ್ರಹ್ಮಣ್ಯ ನಟ್ಟೋಜ ಮಾತನಾಡಿ, ಹಿಂದೂ ಧರ್ಮದ ಬಗೆಗೆ ಹಲವಾರು ಆಕ್ಷೇಪ ಎತ್ತುವ ಅನ್ಯಧರ್ಮಿಯರು ತಮ್ಮ
ಧರ್ಮದಲ್ಲಿನ ಹುಳುಕುಗಳನ್ನು ಮರೆಮಾಚುತ್ತಾರೆ. ಆದರೆ ಹಿಂದೂ ಧರ್ಮದ ಪ್ರತಿಯೊಂದು ಆಚರಣೆಗಳಲ್ಲೂ ಸ್ಪಷ್ಟವಾದ ವೈಜ್ಞಾನಿಕ ತಳಹದಿ ಇರುವುದನ್ನು ಗುರುತಿಸಲು ಅಶಕ್ತರಾಗುತ್ತಾರೆ. ಈ ನಡುವೆ ಹಿಂದೂಧರ್ಮದ ಬಗೆಗೆ ಸ್ವತಃ ಹಿಂದೂಗಳೂ ಅಧ್ಯಯನ ನಡೆಸದೆ ಅನ್ಯಧರ್ಮೀಯನೊಬ್ಬ ವ್ಯಂಗ್ಯವಾಡುವಾಗ ಉತ್ತರ ಕೊಡಲಾಗದೆ ನಿಲ್ಲುತ್ತಿರುವುದು ದುರಂತ. ಧರ್ಮ ಜಾಗೃತಿ ಸಹಿತವಾದ ಶಿಕ್ಷಣ ಇಂದಿನ ಅಗತ್ಯ ಎಂದು ಅಭಿಪ್ರಾಯಪಟ್ಟರು.

ವಿದ್ಯಾರ್ಥಿನಿಯರಾದ ಮಹಿಮಾ ಹೆಗಡೆ ಹಾಗೂ ಅಂಕಿತಾ ಪ್ರಾರ್ಥಿಸಿದರು. ಕಾಲೇಜಿನ ಪ್ರಾಚಾರ್ಯ ರಾಕೇಶ ಕುಮಾರ್ ಕಮ್ಮಜೆ ಸ್ವಾಗತಿಸಿದರು. ಐಕ್ಯುಎಸಿ ಘಟಕದ ಮುಖ್ಯಸ್ಥ ಚಂದ್ರಕಾಂತ ಗೋರೆ ವಂದಿಸಿದರು. ಕನ್ನಡ ಉಪನ್ಯಾಸಕ ಗಿರೀಶ ಭಟ್ ಇಳಂತಿಲ ಕಾರ್ಯಕ್ರಮ ನಿರ್ವಹಿಸಿದರು. ಸಭಾಕಾರ್ಯಕ್ರಮದ ತರುವಾಯ ಶ್ರೀಕೃಷ್ಣಪೂಜೆ ಹಾಗೂ ಪ್ರಸಾದ ವಿತರಣೆ ನಡೆಯಿತು.

Previous Post

ಮೊಸರು ಕುಡಿಕೆ ಉತ್ಸವ ಹಿನ್ನಲೆ : (ಸೆ.6-9) ದ.ಕ. ಜಿಲ್ಲೆಯಲ್ಲಿ ಮದ್ಯದಂಗಡಿ ಬಂದ್ – ಜಿಲ್ಲಾಧಿಕಾರಿ ಆದೇಶ

Next Post

ನೆರೆಮನೆಯ ನಾಯಿ ಕಚ್ಚಿರೋದನ್ನು ಹೇಳದೆ ಮುಚ್ಚಿಟ್ಟಿದ್ದ ಬಾಲಕ : ತಿಂಗಳ ಬಳಿಕ ರೇಬಿಸ್‍ನಿಂದ ಸಾವು

OtherNews

ನರಿಮೊಗರು ಮೇ. 3 ರಂದು ರಾಜ್ಯಮಟ್ಟದ ಕಬಡ್ಡಿ ಪಂದ್ಯಾಟ ಮತ್ತು ಸನ್ಮಾನ ಕಾರ್ಯಕ್ರಮ
ಕ್ರೀಡೆ

ನರಿಮೊಗರು ಮೇ. 3 ರಂದು ರಾಜ್ಯಮಟ್ಟದ ಕಬಡ್ಡಿ ಪಂದ್ಯಾಟ ಮತ್ತು ಸನ್ಮಾನ ಕಾರ್ಯಕ್ರಮ

May 2, 2026
ಉಪ್ಪಿನಂಗಡಿ: ಆಂಬ್ಯುಲೆನ್ಸ್ ಮತ್ತು ಟೆಂಪೋ ಟ್ರಾವೆಲ್ಲರ್ ನಡುವೆ ಡಿಕ್ಕಿ..!!
Featured

ಉಪ್ಪಿನಂಗಡಿ: ಆಂಬ್ಯುಲೆನ್ಸ್ ಮತ್ತು ಟೆಂಪೋ ಟ್ರಾವೆಲ್ಲರ್ ನಡುವೆ ಡಿಕ್ಕಿ..!!

May 1, 2026
ಉಪ್ಪಿನಂಗಡಿ:ದ್ವಿಚಕ್ರ ವಾಹನ ಮತ್ತು ಲಾರಿ ನಡುವೆ ಡಿಕ್ಕಿ: ಸವಾರ ಮೃತ್ಯು..!!
Featured

ಉಪ್ಪಿನಂಗಡಿ:ದ್ವಿಚಕ್ರ ವಾಹನ ಮತ್ತು ಲಾರಿ ನಡುವೆ ಡಿಕ್ಕಿ: ಸವಾರ ಮೃತ್ಯು..!!

April 29, 2026
ಪುತ್ತೂರು : ಹಠಾತ್ ಆರೋಗ್ಯದಲ್ಲಿ ಏರುಪೇರು: ಮಹಿಳೆ ಮೃತ್ಯು..!!!
Featured

ಪುತ್ತೂರು : ಹಠಾತ್ ಆರೋಗ್ಯದಲ್ಲಿ ಏರುಪೇರು: ಮಹಿಳೆ ಮೃತ್ಯು..!!!

April 29, 2026
ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!
Featured

ಪುತ್ತೂರು: ಮನೆಯ ಸಿಟೌಟ್‌ಗೆ ಬಂದು ಹಲ್ಲೆ : ಪ್ರಕರಣ ದಾಖಲು..!!

April 29, 2026
ಪುತ್ತೂರು: (ಎ.30) ವಿದ್ಯುತ್‌ ನಿಲುಗಡೆ..!!
ಪುತ್ತೂರು

ಪುತ್ತೂರು: (ಎ.30) ವಿದ್ಯುತ್‌ ನಿಲುಗಡೆ..!!

April 29, 2026

Leave a Reply Cancel reply

Your email address will not be published. Required fields are marked *

Recent News

ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!

ಕಡಬದಲ್ಲಿ ಅನುಮಾನಾಸ್ಪದ ಸಾವು: ಆತ್ಮಹತ್ಯೆ ಪ್ರಕರಣ ಇದೀಗ ಮರುವಿಚಾರಣೆಗೆ : ಇಬ್ಬರ ವಿರುದ್ಧ ಪ್ರಕರಣ ದಾಖಲು..!!

May 3, 2026
ಬಂಟ್ವಾಳ: ಲಕ್ಷಾಂತರ ರೂ ಮೌಲ್ಯದ ನಿಷೇದಿತ ಎಂ ಡಿ ಎಂ ಎ  ಸಹಿತ ಇಬ್ಬರು ಆರೋಪಿಗಳ ಬಂಧನ..!!!

ಬಂಟ್ವಾಳ: ಲಕ್ಷಾಂತರ ರೂ ಮೌಲ್ಯದ ನಿಷೇದಿತ ಎಂ ಡಿ ಎಂ ಎ  ಸಹಿತ ಇಬ್ಬರು ಆರೋಪಿಗಳ ಬಂಧನ..!!!

May 3, 2026
ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ; ಐವರು ಯುವಕರು ಪಾರು..!!

ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ; ಐವರು ಯುವಕರು ಪಾರು..!!

May 3, 2026
ಮುಂದೆ ಬಾಲವನದಲ್ಲಿ ತಿಂಗಳಿಗೊಂದು ಕಾರ್ಯಕ್ರಮ : ಬಾಲವನ ಅಭಿವೃದ್ಧಿ ಸಮಿತಿಯ ಪ್ರಥಮ ಸಭೆಯ ಬಳಿಕ ಶಾಸಕ ಅಶೋಕ್‌ ಕುಮಾರ್ ರೈ ಹೇಳಿಕೆ..!!

ಮುಂದೆ ಬಾಲವನದಲ್ಲಿ ತಿಂಗಳಿಗೊಂದು ಕಾರ್ಯಕ್ರಮ : ಬಾಲವನ ಅಭಿವೃದ್ಧಿ ಸಮಿತಿಯ ಪ್ರಥಮ ಸಭೆಯ ಬಳಿಕ ಶಾಸಕ ಅಶೋಕ್‌ ಕುಮಾರ್ ರೈ ಹೇಳಿಕೆ..!!

May 3, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page

No Result
View All Result

© 2020 Zoomin TV. All Rights Reserved. Website made with ❤️ by The Web People.