ಪುತ್ತೂರು : ಮನೆ ಮಂದಿಯನ್ನು ಕಟ್ಟಿ ಹಾಕಿ ಖದೀಮರ ಗ್ಯಾಂಗ್ ದರೋಡೆ ಮಾಡಿದ ಘಟನೆ ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಕುದ್ಕಾಡಿ ಎಂಬಲ್ಲಿ ನಡೆದಿದೆ.
ಬಡಗನ್ನೂರು ಕುಡ್ಕಾಡಿ ನಿವಾಸಿ, ಗ್ರಾಮ ಪಂಚಾಯತ್ ಮಾಜಿ ಸದಸ್ಯ ಗುರುಪ್ರಸಾದ್ ರೈ ಎಂಬುವವರಿಗೆ ಸೇರಿದ ಮನೆ ಇದಾಗಿದ್ದು, ಮನೆಯಲ್ಲಿ ಗುರುಪ್ರಸಾದ್ ಮತ್ತು ಅವರ ತಾಯಿ ಇದ್ದ ಸಂದರ್ಭದಲ್ಲಿಯೇ ಮನೆಗೆ ನುಗ್ಗಿದ ಖದೀಮರ ಗ್ಯಾಂಗ್, ಮನೆಯವರನ್ನು ಕಟ್ಟಿ ಹಾಕಿ ಮನೆ ದರೋಡೆ ಮಾಡಿದ್ದಾರೆ.
ಸ್ಥಳಕ್ಕೆ ವಿಧಿ ವಿಜ್ಞಾನ, ಬೆರಳಚ್ಚು ಮತ್ತು ಶ್ವಾನದಳ ಭೇಟಿ
ನಸುಕಿನ ಜಾವ ಮನೆಯ ಮುಂದಿನ ಬಾಗಿಲು ಮುರಿದು ನುಗ್ಗಿದ ಸುಮಾರು 8 ಜನರಿದ್ದ ದರೋಡೆಕೋರರ ತಂಡ. 40 ಸಾವಿರ ನಗದು ಮತ್ತು ಸುಮಾರು 120 ಗ್ರಾಂ ಚಿನ್ನವನ್ನು ದರೋಡೆ ಮಾಡಿದ್ದಾರೆ. ಇವರು ತುಳು ಮತ್ತು ಕನ್ನಡ ಭಾಷೆ ಮಾತನಾಡುತ್ತಿದ್ದರು ಎಂದು ಗುರುಪ್ರಸಾದ್ ರೈ ಪೊಲೀಸರಿಗೆ ಮಾಹಿತಿ ನೀಡಿದ್ದು, ಸ್ಥಳಕ್ಕೆ ವಿಧಿ ವಿಜ್ಞಾನ, ಬೆರಳಚ್ಚು ಮತ್ತು ಶ್ವಾನದಳ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಇನ್ನು ವಿಷಯ ತಿಳಿಯುತ್ತಿದ್ದಂತೆ ಪಶ್ಚಿಮ ವಲಯ ಐಜಿಪಿ ಚಂದ್ರಗುಪ್ತ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿ.ಬಿ. ರಿಷ್ಯಂತ್ ಹಾಗೂ ಪುತ್ತೂರು ಡಿವೈಎಸ್ಪಿ ಗಾನ.ಪಿ.ಕುಮಾರ್ ಭೇಟಿ ನೀಡಿದ್ದಾರೆ.
























