ಸುಳ್ಯ : ಕಳೆದ ವರ್ಷ ಕಳೆಂಜ ಎಂಬಲ್ಲಿ ನಡೆದಿದ್ದ ಮಸೂದ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳಿಗೆ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ ಎಂದು ವರದಿಯಾಗಿದೆ.
ಆರೋಪಿಗಳಾದ ರಂಜಿತ್, ಸದಾಶಿವ, ಸುಧೀರ್ ಎಂಬವರಿಗೆ ಉಚ್ಚ ನ್ಯಾಯಾಲಯ ನ್ಯಾಯಮೂರ್ತಿಗಳಾದ ಜಸ್ಟಿಸ್ ವಿಶ್ವಜೀತ್ ಎಸ್. ಶೆಟ್ಟಿ ಜಾಮೀನು ಮಂಜೂರು ಮಾಡಿದರು.
ಆರೋಪಿಗಳ ಪರ ವಕೀಲರಾದ ಅರುಣ್ ಶ್ಯಾಮ್ ವಾದ ಮಂಡಿಸಿದರು. ವಕೀಲರಾದ ಸುಯೋಗ್ ಹೇರಳೆ ಮತ್ತು ನಿಶಾಂತ್ ಕುಶಾಲಪ್ಪ ವಕಾಲತ್ತು ಮಾಡಿದ್ದರು.


























