ಬಂಟ್ವಾಳ : ಮಾಜಿ ಸಚಿವ ಬಿ ರಮಾನಾಥ ರೈ ಅವರ ಹುಟ್ಟು ಹಬ್ಬದ ಪ್ರಯುಕ್ತ ಪಾಣೆಮಂಗಳೂರು ಬ್ಲಾಕ್ ಯುವ ಕಾಂಗ್ರೆಸ್ ಸಮಿತಿ ಹಾಗೂ ಅಲ್ಪ ಸಂಖ್ಯಾತ ಘಟಕದ ವತಿಯಿಂದ ಸೆ.13 ರಂದು ಬಿ.ಸಿ. ರೋಡಿನ ಹೋಟೇಲ್ ರಂಗೋಲಿ ಸಭಾಂಗಣದಲ್ಲಿ ರಕ್ತದಾನ ಶಿಬಿರ ನಡೆಯಲಿದೆ ಎಂದು ಪಾಣೆಮಂಗಳೂರು ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷ ಇಬ್ರಾಹಿಂ ನವಾಝ್ ಬಡಕಬೈಲು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕೆ.ಪಿ.ಸಿ.ಸಿ ಸದಸ್ಯ ಚಂದ್ರಪ್ರಕಾಶ್ ಶೆಟ್ಟಿ ತುಂಬೆ ಹಾಗೂ ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಸುದೀಪ್ ಕುಮಾರ್ ಶೆಟ್ಟಿ ಅವರು ಈ ಕಾರ್ಯಕ್ರಮದ ಪೋಸ್ಟರನ್ನು ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಕಛೇರಿಯಲ್ಲಿ ಸೋಮವಾರ ಬಿಡುಗಡೆಗೊಳಿಸಿದರು.
ಈ ಸಂದರ್ಭದಲ್ಲಿ ಪಾಣೆಮಂಗಳೂರು ಬ್ಲಾಕ್ ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷ ಅರ್ಷದ್ ಸರವು, ಯುವ ಕಾಂಗ್ರೆಸ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ ರೋಶನ್ ರೈ, ಪ್ರಸಾದ್ ಗಾಣಿಗ ಪಾಣೆಮಂಗಳೂರು ಬ್ಲಾಕ್ ಸಮಿತಿ ಪದಾಧಿಕಾರಿಗಳು ಹಾಗೂ ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು.



























