ಪುತ್ತೂರು : ಸಿಲ್ಕ್ಸ್ & ಸಾರಿ ಮಳಿಗೆ ‘ತಮನ್ವಿ’ ಸೆ.16 ರಂದು ಬೊಳುವಾರಿನ ಇನ್ ಲ್ಯಾಂಡ್ ಮಯೂರ ಬಿಲ್ಡಿಂಗ್ ನಲ್ಲಿ ಶುಭಾರಂಭಗೊಳ್ಳಲಿದೆ.
ಲಯನ್ಸ್ ಕ್ಲಬ್ ನ ಮಾಜಿ ಜಿಲ್ಲಾ ಗವರ್ನರ್ ಡಾ. ಗೀತಾಪ್ರಕಾಶ್, ವಿಟ್ಲ ಸುರಕ್ಷಾ ಆಸ್ಪತ್ರೆಯ ಡಾ. ಗಾಯತ್ರಿ ಜಿ. ಪ್ರಕಾಶ್, ಮಾಜಿ ಜಿಲ್ಲಾ ಪಂಚಾಯತ್ ಸದಸ್ಯೆ ಅನಿತಾ ಹೇಮಾನಾಥ್ ಶೆಟ್ಟಿ, ಮಾಜಿ ನಗರಸಭಾ ಅಧ್ಯಕ್ಷ ಜೀವಂಧರ್ ಜೈನ್, ಮಾಜಿ ನಗರಸಭಾ ಉಪಾಧ್ಯಕ್ಷೆ ವಿದ್ಯಾ ಆರ್. ಗೌರಿ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಆಗಮಿಸಲಿದ್ದಾರೆ.
ಉತ್ತಮ ಗುಣಮಟ್ಟದ ಮನಸೂರೆಗೊಳ್ಳುವಂತಹ ಸೀರೆಗಳು ಹಾಗೂ ವಿವಿಧ ವಸ್ತ್ರಗಳ ಅದ್ಭುತ ಸಂಗ್ರಹವೇ ಕೈಗೆಟುಕುವ ದರದಲ್ಲಿ ಗ್ರಾಹಕರಿಗೆ ದೊರಕಲಿದೆ ಎಂದು ಸಂಸ್ಥೆಯ ಮಾಲಕರಾದ ಮಾಲಾಶ್ರೀ ವಿಜೇತ್ ರವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ..



























