ಉಪ್ಪಿನಂಗಡಿ : ಮಾದಕ ದ್ರವ್ಯ ಗಾಂಜಾ ಸೇವನೆ ಮಾಡಿ ಸಾರ್ವಜನಿಕ ಸ್ಥಳದಲ್ಲಿ ಅನುಚಿತವಾಗಿ ವರ್ತಿಸುತ್ತಿದ್ದ ವ್ಯಕ್ತಿಯನ್ನು ಪೊಲೀಸರು ವಶಕ್ಕೆ ಪಡೆದ ಘಟನೆ ನೆಕ್ಕಿಲಾಡಿ ಬಸ್ ನಿಲ್ದಾಣದ ಬಳಿ ನಡೆದಿದೆ.
ಕರಾಯ ನಿವಾಸಿ ವೆಂಕಟೇಶ್ (32) ಬಂಧಿತ ವ್ಯಕ್ತಿ.
ಪುತ್ತೂರು ತಾಲೂಕು, 34 ನೇ ನೆಕ್ಕಿಲಾಡಿ ಗ್ರಾಮದ, ನೆಕ್ಕಿಲಾಡಿ ಎಂಬಲ್ಲಿ ಬಸ್ ನಿಲ್ದಾಣದ ಬಳಿ ವ್ಯಕ್ತಿಯೋರ್ವ ಅಮಲು ಸೇವನೆ ಮಾಡಿ ಅನುಚಿತವಾಗಿ ವರ್ತಿಸುತ್ತಿರುವುದನ್ನು ಕಂಡು ಉಪ್ಪಿನಂಗಡಿ ಠಾಣಾ ಪೊಲೀಸ್ ಉಪನಿರೀಕ್ಷಕರು, ಠಾಣಾ ಸಿಬ್ಬಂದಿಗಳೊಂದಿಗೆ ತೆರಳಿ ವಿಚಾರಿಸಿದಾಗ ವ್ಯಕ್ತಿಯು ಮಾದಕ ದ್ರವ್ಯ ಗಾಂಜಾ ಸೇವನೆ ಮಾಡಿದ ಬಗ್ಗೆ ಒಪ್ಪಿಕೊಂಡಿರುತ್ತಾನೆ.
ಈ ಬಗ್ಗೆ ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದಾಗ ಗಾಂಜಾ ಸೇವನೆ ಮಾಡಿರುವುದು ದೃಢಪಟ್ಟಿರುತ್ತದೆ.

























