ಕೊಲಂಬೊ: ಲಂಕಾ ವಿರುದ್ಧ 10 ವಿಕೆಟ್‌ಗಳ ಭರ್ಜರಿ ಜಯ ಸಾಧಿಸುವ ಮೂಲಕ ಟೀಂ ಇಂಡಿಯಾ 8ನೇ ಬಾರಿಗೆ ಏಷ್ಯಾಕಪ್ ಕಿರೀಟವನ್ನ ಮುಡಿಗೇರಿಸಿಕೊಂಡಿದೆ.
1984, 1988, 1991, 1995, 2010, 2016, 2018ರಲ್ಲಿ ಏಷ್ಯಾಕಪ್ ಚಾಂಪಿಯನ್ ಆಗಿದ್ದ ಭಾರತ 8ನೇ ಬಾರಿಗೆ ಚಾಂಪಿಯನ್ ಆಗಿ ಹೊರಹೊಮ್ಮಿದೆ.
ಜೊತೆಗೆ ರೋಹಿತ್ ಶರ್ಮಾ ನಾಯಕತ್ವದಲ್ಲಿ ಟೀಂ ಇಂಡಿಯಾ ಗೆದ್ದ 2ನೇ ಏಕದಿನ ಏಷ್ಯಾಕಪ್ ಚಾಂಪಿಯನ್ ಪಟ್ಟವೂ ಇದಾಗಿದೆ.
ಇನ್ನೂ 6 ಬಾರಿ ಚಾಂಪಿಯನ್ ಹಾಗೂ 6 ಬಾರಿ ರನ್ನರ್ ಅಪ್ ಪ್ರಶಸ್ತಿ ಗೆದ್ದುಕೊಂಡಿದ್ದ ಶ್ರೀಲಂಕಾ 7ನೇ ಬಾರಿಗೆ ರನ್ನರ್ ಅಪ್ ಪ್ರಶಸ್ತಿ ತನ್ನದಾಗಿಸಿಕೊಂಡಿದೆ.
ಪ್ರೇಮದಾಸ ಕ್ರೀಡಾಂಗಣದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಶ್ರೀಲಂಕಾ ತಂಡ ಅಗ್ರಕ್ರಮಾಂಕದ ಬ್ಯಾಟರ್‌ಗಳ ವೈಫಲ್ಯದಿಂದ 15.2 ಓವರ್‌ಗಳಲ್ಲಿ ಕೇವಲ 50 ರನ್‌ಗಳಿಗೆ ಆಲೌಟ್ ಆಯಿತು. 51 ರನ್‌ಗಳ ಅಲ್ಪ ಮೊತ್ತದ ಗುರಿ ಬೆನ್ನತ್ತಿದ್ದ ಭಾರತ ಕೇವಲ 6.1 ಓವರ್‌ಗಳಲ್ಲೇ 51 ರನ್ ಚಚ್ಚಿ 10 ವಿಕೆಟ್‌ಗಳ ಭರ್ಜರಿ ಜಯ ಸಾಧಿಸಿತು.
ಕಡಿಮೆ ರನ್ ಗುರಿ ಪಡೆದ ಹಿನ್ನೆಲೆಯಲ್ಲಿ ಬ್ಯಾಟಿಂಗ್‌ನಲ್ಲಿ ಬದಲಾವಣೆ ಮಾಡಿಕೊಂಡಿತು. ನಾಯಕ ರೋಹಿತ್ ಶರ್ಮಾ ಶುಭಮನ್ ಗಿಲ್ ಜೊತೆಯಾಗಿ ಇಶಾನ್ ಕಿಶನ್ ಅವರನ್ನ ಆರಂಭಿಕರಾಗಿ ಕಣಕ್ಕಿಳಿಸಿದರು. ಆರಂಭದಿಂದಲೇ ಲಂಕಾ ಬೌಲರ್‌ಗಳ ಬೆಂಡೆತ್ತಿದ್ದ ಕಿಶನ್ ಹಾಗೂ ಗಿಲ್ ಜೋಡಿ ಕೇವಲ 6.1 ಓವರ್‌ನಲ್ಲೇ 51 ರನ್ ಸಿಡಿಸಿ ಮ್ಯಾಚ್ ಮುಗಿಸಿತು. ಇಶಾನ್ ಕಿಶನ್ 18 ಎಸೆತಗಳಲ್ಲಿ 23 ರನ್, ಶುಭಮನ್ ಗಿಲ್ 19 ಎಸೆತಗಳಲ್ಲಿ 27 ರನ್ ಗಳಿಸಿ ಮಿಂಚಿದರು.
ಇದಕ್ಕೂ ಮುನ್ನ ಟಾಸ್ ಗೆದ್ದು ಟೀಂ ಇಂಡಿಯಾಕ್ಕೆ ಪ್ರಬಲ ಪೈಪೋಟಿ ನೀಡಲು ಕಣಕ್ಕಿಳಿದಿದ್ದ ಶ್ರೀಲಂಕಾ ತಂಡ ತವರಿನಲ್ಲಿ ತೀವ್ರ ಮುಖಭಂಗ ಅನುಭವಿಸಿತು. 15.2 ಓವರ್‌ಗಳಲ್ಲಿ 50 ರನ್‌ಗಳಿಗೆ ಆಲೌಟ್ ಆಗುವ ಮೂಲಕ 39 ವರ್ಷಗಳ ನಂತರ ಏಷ್ಯಾಕಪ್ ಕ್ರಿಕೆಟ್ ಇತಿಹಾಸದಲ್ಲೇ ಅತಿ ಕಡಿಮೆ ರನ್ ದಾಖಲಿಸಿದ ಕೆಟ್ಟ ದಾಖಲೆಯನ್ನೂ ಹೆಗಲಿಗೇರಿಸಿಕೊಂಡಿತು. 1984ರ ಏಷ್ಯಾಕಪ್ ಉದ್ಘಾಟನಾ ಆವೃತ್ತಿಯಲ್ಲಿ ಭಾರತದ ವಿರುದ್ಧ 41 ಓವರ್‌ಗಳಲ್ಲಿ ಕೇವಲ 96 ರನ್‌ಗಳಿಗೆ ಆಲೌಟ್ ಆಗಿತ್ತು. ಆದರೂ ಟ್ರೋಫಿ ಗೆಲ್ಲುವಲ್ಲಿ ಯಶಸ್ವಿಯಾಗಿತ್ತು. ಆ ನಂತರ 1986 ರಲ್ಲಿ ಪಾಕಿಸ್ತಾನದ ವಿರುದ್ಧ 33.5 ಓವರ್‌ಗಳಲ್ಲಿ 116 ರನ್‌ಗಳಿಗೆ ಆಲೌಟ್ ಆಗಿತ್ತು.