ಮಂಗಳೂರು : ಖಾಸಗಿ ಬಸ್ವೊಂದು ರಸ್ತೆ ದಾಟಲು ನಿಂತಿದ್ದ ಬೈಕ್ ಸವಾರರಿಗೆ ಡಿಕ್ಕಿ ಹೊಡೆದ ಘಟನೆ ಮಂಗಳೂರು ಹೊರವಲಯದ ಸುರತ್ಕಲ್ ನ ಹೊಸಬೆಟ್ಟು ಎಂಬಲ್ಲಿ ನಡೆದಿದೆ.
ಓವರ್ ಟೇಕ್ ಮಾಡಲು ಹೋಗಿ ಬೈಕ್ ಗೆ ಡಿಕ್ಕಿ ಹೊಡೆದಿದೆ. ಈ ಅಪಘಾತದಲ್ಲಿ ಹಳೆಯಂಗಡಿ ಬಳಿಯ ಪಕ್ಷಿಕೆರೆ ನಿವಾಸಿ ಮೊಹಮ್ಮದ್ ಶಾಹೀಲ್ (20) ಮತ್ತು ಅರಾಫತ್ (19) ಗಂಭೀರ ಗಾಯಗೊಂಡಿದ್ದು, ಸಿಸಿಟಿವಿಯಲ್ಲಿ ದೃಶ್ಯ ಸೆರೆಯಾಗಿದೆ

ಬಸ್ ಮಂಗಳೂರಿನಿಂದ ಉಡುಪಿಗೆ ತೆರಳುತ್ತಿತ್ತು. ಡಿವೈಡರ್ ಬಳಿ ಬೈಕ್ ಸವಾರರು ರಸ್ತೆ ದಾಟಲು ಕಾಯುತ್ತಿದ್ದಾಗ ಅತ್ತ ಕಡೆಯಿಂದ ವೇಗವಾಗಿ ಬಂದ ಬಸ್ ನಿಯಂತ್ರಣಕ್ಕೆ ಸಿಗದೆ ಡಿಕ್ಕಿ ಹೊಡೆದಿದೆ. ಬೈಕ್ ಸವಾರರಿಬ್ಬರು ಗಂಭೀರ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಬಸ್ ಚಾಲಕನ ನಿರ್ಲಕ್ಷದ ಚಾಲನೆಯಿಂದ ಈ ಅಪಫಾತ ಸಂಭವಿಸಿದೆ ಎನ್ನಲಾಗುತ್ತಿದೆ.
ಬಸ್ ವೇಗವಾಗಿ ಬಂದು ಅಪಘಾತ ಸಂಭವಿಸುವ ದೃಶ್ಯ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದ್ದು, ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.



























