ಪುತ್ತೂರು : ಮಹಿಳೆಯೋರ್ವರಿಗೆ ವಾಟ್ಸಪ್ ಕರೆ ಮಾಡಿ ಲಕ್ಷಾಂತರ ರೂ. ವಂಚಿಸಿರುವ ಬಗ್ಗೆ ದಕ್ಷಿಣ ಕನ್ನಡ ಜಿಲ್ಲಾ ಸಿಇಎನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪುತ್ತೂರು ತಾಲೂಕು ಚಿಕ್ಕಮುಡ್ನೂರು ಮೂಲದ ಮಹಿಳೆ ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಾಗಿದೆ.
ಮಹಿಳೆಗೆ 2022 ನೇ ಮೇ ತಿಂಗಳಲ್ಲಿ ಅಪರಿಚಿತ ವ್ಯಕ್ತಿ ವಾಟ್ಸಪ್ ಕರೆ ಮಾಡಿ ತಾನು ಕೌನ್ ಬನೇಗಾ ಕರೋಡ್ ಪತಿ ಎಂಬ ಕಾರ್ಯಕ್ರಮದಿಂದ ಕರೆ ಮಾಡುತ್ತಿರುವುದಾಗಿ ಹಾಗೂ ಮಹಿಳೆ ರೂ. 25 ಲಕ್ಷ ಲಾಟರಿ ಗೆದ್ದಿರುವುದಾಗಿ ತಿಳಿಸಿರುತ್ತಾರೆ.
ಸದ್ರಿ ಹಣವನ್ನು ಪಡೆಯಲು ಟ್ಯಾಕ್ಸ್ ಕಟ್ಟಲು ಹಾಗೂ ಇನ್ನಿತರ ಚಾರ್ಜಸ್ ಗಳ ಕಾರಣ ಹೇಳಿ ಮಹಿಳೆಯಿಂದ 2022 ಮೇ ತಿಂಗಳಿನಿಂದ 2023 ಸಪ್ಟಂಬರ್ 13 ರವರೆಗಿನ ಅವಧಿಯಲ್ಲಿ ಅಪರಿಚಿತ ವ್ಯಕ್ತಿಯು ವಿವಿಧ ಬ್ಯಾಂಕ್ ಖಾತೆಗಳಿಗೆ ಸುಮಾರು ರೂ. 12,93,200/- ಹಣವನ್ನು ವರ್ಗಾಯಿಸಿಕೊಂಡು ವಂಚಿಸಿರುತ್ತಾನೆ ಎಂಬುದಾಗಿ ದೂರಿನಲ್ಲಿ ತಿಳಿಸಿದ್ದಾರೆ.
ಈ ಬಗ್ಗೆ ದಕ್ಷಿಣ ಕನ್ನಡ ಜಿಲ್ಲಾ ಸಿಇಎನ್ ಅಪರಾಧ ಪೊಲೀಸ್ ಠಾಣೆಯಲ್ಲಿ ಅಕ್ರ ಅ.ಕ್ರ: 29/2023 ಕಲಂ: 66(D), IT ಆಕ್ಟ್ 417 420 ಐಪಿಸಿ ಯಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

























