ವಿಟ್ಲ : ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದ ಪುಟ್ಟ ಬಾಲಕಿಯೊಬ್ಬಳು ಮೃತಪಟ್ಟ ಘಟನೆ ನಡೆದಿದೆ.
ಮೃತ ಬಾಲಕಿಯನ್ನು ಮಿತ್ತೂರು ಸಮೀಪದ ಪಾಟ್ರಕೋಡಿ ನಿವಾಸಿ ಇಬ್ರಾಹಿಂ ಬಾತಿಷಾ ರವರ ಪುತ್ರಿ ಜಮೀಲಾ ಸನಿಕ (4) ಎಂದು
ಗುರುತಿಸಲಾಗಿದೆ.

ಪುತ್ತೂರಿನ ಮುರದಲ್ಲಿರುವ ಅಲ್ ಬಿರ್ರ್ ಸ್ಕೂಲ್ ನ
ಎಲ್.ಕೆ.ಜಿ.ಯಲ್ಲಿ ಕಲಿಯುತ್ತಿದ್ದ ಈಕೆ ಅನಾರೋಗ್ಯದಿಂದಿದ್ದು, ಬೆಂಗಳೂರಿನ ಹೃದಯಾಲಯ ಆಸ್ಪತ್ರೆಯಲ್ಲಿ ಚಿಕಿತ್ಸೆ
ಪಡೆಯುತ್ತಿದ್ದಳು.
ಇಂದು ಮುಂಜಾನೆ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲೇ ಮೃತಪಟ್ಟಿದ್ದಾಳೆ ಎಂದು ವರದಿಯಾಗಿದೆ.


























