ವಿಟ್ಲ : ಹಳೆ ಬಸ್ ನಿಲ್ದಾಣದಲ್ಲಿ ಸೌಜನ್ಯ ನ್ಯಾಯಪರ ಹೋರಾಟ ಸಮಿತಿ ವಿಟ್ಲ ವತಿಯಿಂದ ಪ್ರತಿಭಟನೆ ನಡೆಯಿತು.
ಪ್ರತಿಭಟನೆಯನ್ನುದ್ದೇಶಿಸಿ ಸೌಜನ್ಯ ನ್ಯಾಯಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಮಾತನಾಡಿದರು.
ದೈವ ಚಿಂತಕ ತಮ್ಮಣ್ಣ ಶೆಟ್ಟಿ, ನ್ಯಾಯಪರ ಹೋರಾಟಗಾರ ಗಿರೀಶ್ ಮಠ್ಠಣ್ಣನವರ್ ಮಾತನಾಡಿದರು.
ಸೌಜನ್ಯ ತಾಯಿ ಕುಸುಮಾವತಿ ಹಾಗೂ ಕುಟುಂಬ ಸೆರಗೊಡ್ಡಿ ನ್ಯಾಯಕ್ಕಾಗಿ ಎಲ್ಲರ ಸಹಕಾರ ಬೇಡಿದರು.
ವಿವಿಧ ಸಂಘಟನೆಗಳ ಸಹಕಾರದಿಂದ ವಿಟ್ಲ ಪಂಚಲಿಂಗೇಶ್ವರ ದೇವಸ್ಥಾನದ ರಥದ ಗದ್ದೆಯ ಬಳಿಯಿಂದ ವಿಟ್ಲ ಹಳೆ ಬಸ್ ನಿಲ್ದಾಣದವರೆಗೆ ಮೆರವಣಿಗೆ ನಡೆಯಿತು.
ದ.ಕ. ಜಿಲ್ಲಾ ದಲಿತ್ ಸೇವಾ ಸಮಿತಿ ಸ್ಥಾಪಕಾಧ್ಯಕ್ಷ ಬಿ.ಕೆ.ಸೇಸಪ್ಪ ಬೆದ್ರಕಾಡು, ಹಿರಿಯರಾದ ವೀರಪ್ಪ ಗೌಡ, ಉದ್ಯಮಿ ಸುರೇಶ್ ಶೆಟ್ಟಿ ಮುಂಬಯಿ ಮತ್ತಿತರರು ಉಪಸ್ಥಿತರಿದ್ದರು.
ಪುರಂದರ ಇಂದ್ರಪಡ್ಪು ಪ್ರಾರ್ಥಿಸಿದರು. ಸಮಿತಿ ಸಂಚಾಲಕ ದೇವಿಪ್ರಸಾದ್ ಶೆಟ್ಟಿ ಬೆಂಞನ್ತಿಮಾರು ಸ್ವಾಗತಿಸಿ, ಪ್ರಸ್ತಾವನೆಗೈದರು. ವಂದಿಸಿದರು. ಹರೀಶ್ ವಿಟ್ಲ ಕಾರ್ಯಕ್ರಮ ನಿರೂಪಿಸಿದರು.


























