ಬೆಳ್ತಂಗಡಿ : ಉಜಿರೆ ಪರಿಸರದಲ್ಲಿ ನಡೆದ ಮನೆ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ಉಮೇಶ್ (ಉಮೇಶ ಬಳೆಗಾರ) ಬಂಧಿತ ಆರೋಪಿ.

ಬೆಳ್ತಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯ ಉಜಿರೆ ಪರಿಸರದಲ್ಲಿ ನಡೆದ ಮನೆ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ, ಬೆಳ್ತಂಗಡಿ ಠಾಣೆಯಲ್ಲಿ ಕಲಂ; 454,380 ಐಪಿಸಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿ, ಬೆಳ್ತಂಗಡಿ ಠಾಣಾ ಪೊಲೀಸರು ಆರೋಪಿಯನ್ನು ಮೈಸೂರು ಜಿಲ್ಲೆಯಿಂದ ದಸ್ತಗಿರಿ ಮಾಡಿರುತ್ತಾರೆ.
ಆರೋಪಿಯು ಕಳವು ಮಾಡಿ ಮಾರಾಟ ಮಾಡಿದ್ದ ಅಂದಾಜು ರೂ 4,68,800/- ಮೌಲ್ಯದ ಚಿನ್ನಾಭರಣಗಳನ್ನು ವಶಪಡಿಸಿಕೊಳ್ಳಲಾಗಿದೆ.

























