ಪುತ್ತೂರು : ತಾಲೂಕಿನ ಬಡಗನ್ನೂರು ಗ್ರಾಮಪಂಚಾಯತ್ ವ್ಯಾಪ್ತಿಯ ಕುದ್ಕಾಡಿ ಎಂಬಲ್ಲಿ ಸೆ.7 ರಂದು ಮನೆ ಬಾಗಿಲು ಮುರಿದು ಮನೆಯೊಳಗೆ ನುಗ್ಗಿದ ದರೋಡೆಕೋರರ ತಂಡವೊಂದು ಮನೆ ಮಂದಿಯನ್ನು ಕಟ್ಟಿ ಹಾಕಿ ನಗ-ನಗದು ದರೋಡೆ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಆರು ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ.
ಬಂಧಿತ ಆರೋಪಿಗಳನ್ನು ಸುಧೀರ್ ಪೆರುವಾಯಿ, ಕೇರಳದ ಕಾಸರಗೋಡು ಜಿಲ್ಲೆಯ ನಿವಾಸಿಗಳಾದ ಪಚ್ಚಂಬಳ ರವಿ, ಕಿರಣ್, ವಸಂತ, ಫಸಲ್, ನಿಝಾರ್ ಎಂದು ಗುರುತಿಸಲಾಗಿದ್ದು, ಇವರೆಲ್ಲರೂ ಕ್ರಿಮಿನಲ್ ಹಿನ್ನಲೆಯುಳ್ಳ ಆರೋಪಿಗಳಾಗಿದ್ದಾರೆ.
ಪಚ್ಚಂಬಳ ರವಿಯು ಮಂಗಳೂರಿನ ತಾಲೂಕು ಪಂಚಾಯತ್ ಅಧ್ಯಕ್ಷ ಜಬ್ಬಾರ್ ಹತ್ಯೆಯ ಆರೋಪಿಯಾಗಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಜೀವಾವಧಿ ಶಿಕ್ಷೆ ಎದುರಿಸುತ್ತಿದ್ದ ಆರೋಪಿಯಾಗಿದ್ದು, ಈತ ಪೆರೋಲ್ ಮೂಲಕ ಜೈಲಿನಿಂದ ಹೊರಗೆ ಬಂದು ಕಳ್ಳವು ಕೃತ್ಯ ನಡೆಸಿದ್ದಾನೆ.
ಇನ್ನು ಆರೋಪಿಗಳಿಂದ ಕೃತ್ಯಕ್ಕೆ ಬಳಸಿದ ಕಾರು, ಚಿನ್ನ ವಶಕ್ಕೆ ಪಡೆದುಕೊಳ್ಳಲಾಗಿದ್ದು, ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬಡಗನ್ನೂರು ಗ್ರಾಮಪಂಚಾಯತ್ ನ ಮಾಜಿ ಸದಸ್ಯರಾಗಿರುವ ಗುರುಪ್ರಸಾದ್ ರೈ ಯವರ ಮನೆಯಲ್ಲಿ ಈ ದರೋಡೆ ಕೃತ್ಯ ನಡೆದಿತ್ತು.
ವರ್ಷಗಳ ಹಿಂದೆ ಗುರುಪ್ರಸಾದ್ ರೈ ಯವರ ಮನೆಗೆ ವಾಹನವೊಂದರಲ್ಲಿ ಚಾಲಕನಾಗಿ ಬಂದಿದ್ದ ಸುಧೀರ್ ಪೆರುವಾಯಿ ಎಂಬಾತ ಗುರುಪ್ರಸಾದ್ ರೈಯವರ ಮನೆಯ ವಿಷಯವನ್ನು ತಿಳಿದುಕೊಂಡು ದರೋಡೆ ತಂಡಕ್ಕೆ ಮಾಹಿತಿ ನೀಡಿ ಬಳಿಕ ಆತನೂ ಸೇರಿ ತಂಡ ಈ ಕೃತ್ಯ ಎಸಗಿದೆ.
ಸೆ.6 ರಂದು ರಾತ್ರಿ ಕುಡ್ಕಾಡಿ ಮನೆಯಲ್ಲಿ ದರೋಡೆ ನಡೆದಿತ್ತು. ಕೃತ್ಯ ಎಸಗುವ ಮೊದಲ ದಿನ ರಾತ್ರಿ ತಂಡವೊಂದು ರಾತ್ರಿ ವೇಳೆ ಗುರುಪ್ರಸಾದ್ ರೈಯವರ ಮನೆಯ ಬಳಿ ಬಂದು ಬಾಗಿಲು ಬಡಿದು ಹೋಗಿದ್ದರು.
ಪೊಲೀಸ್ ಅಧೀಕ್ಷಕ ರಿಷ್ಯಂತ್ ಸಿ.ಬಿ., ಮಾನ್ಯ ಹೆಚ್ಚುವರಿ ಪೊಲೀಸ್ ಅಧೀಕ್ಷಕ ಧರ್ಮಪ್ಪ ಎಸ್ .ಎಂ. ಇವರುಗಳ ನಿರ್ದೇಶನದಂತೆ ಮತ್ತು ಪುತ್ತೂರು ಉಪ-ವಿಭಾಗದ ಪೊಲೀಸ್ ಉಪ ಅಧೀಕ್ಷಕ ಡಾ. ಗಾನ ಪಿ, ಕುಮಾರ್ ರವರ ಮಾರ್ಗದರ್ಶನದ ಮೇರೆಗೆ ವಿಶೇಷ ಪತ್ತೆ ತಂಡದ ಅತ್ತೂರು ಗ್ರಾಮಾಂತರ ವೃತ್ತ ನಿರೀಕ್ಷಕ ರವಿ ಬಿ.ಎಸ್. ರವರ ನೇತೃತ್ವದಲ್ಲಿ ಪುತ್ತೂರು ಸಂಚಾರ ಪೊಲೀಸ್ ಪಿಎಸ್‌ಐ ಉದಯರವಿ ಎಂ ವೈ, ಪುತ್ತೂರು ಗ್ರಾಮಾಂತರ ಠಾಣಾ ಪಿಎಸ್‌ಐ ಧನಂಜಯ ಬಿ.ಸಿ., ಉಪ್ಪಿನಂಗಡಿ ಠಾಣಾ ಪಿಎಸ್‌ಐ ರುಕ್ಮ ನಾಯ್ಕ್, ಉಪ್ಪಿನಂಗಡಿ ಠಾಣಾ ಹೆಚ್.ಸಿ. ಹರೀಶ್ಚಂದ್ರ, ವೇಣೂರು ಠಾಣಾ ಹೆಚ್.ಸಿ. ಪ್ರವೀಣ್ ಮೂರುಗೋಳಿ, ವಿಟ್ಲ ಪೊಲೀಸ್ ಠಾಣಾ ಹೆಚ್ ಸಿ ಉದಯ ರೈ, ಪುತ್ತೂರು ಗ್ರಾಮಾಂತರ ವೃತ್ತ ಕಛೇರಿಯ ಹೆಚ್ ಸಿ ಅಬ್ದುಲ್ ಸಲೀಂ, ಪಿಸಿ, ಜಗದೀಶ್ ಅತ್ತಾಜೆ, ಎ.ಹೆಚ್.ಸಿ ಹರೀಶ್, ಪುತ್ತೂರು ಗ್ರಾಮಾಂತರ ಠಾಣಾ ಎಎಸ್‌ಐ ಮುರುಗೇಶ್, ಹೆಚ್.ಸಿ ಪ್ರವೀಣ್ ರೈ, ಹೆಚ್.ಸಿ ಅದ್ರಾಮ್, ಹೆಚ್.ಸಿ ಬಾಲಕೃಷ್ಣ, ಹೆಚ್.ಸಿ ಹರೀಶ್, ಹೆಚ್.ಸಿ ಪ್ರಶಾಂತ್, ಪಿಸಿ ಮುನಿಯ ನಾಯ್ಕ, ಪುತ್ತೂರು ಸಂಚಾರ ಠಾಣಾ ಹೆಚ್.ಸಿ ಪ್ರಶಾಂತ್ ರೈ, ಪುತ್ತೂರು ನಗರ ಠಾಣಾ ಪಿಸಿ ವಿನಾಯಕ ಎಸ್ ಬಾರ್ಕಿ, ಪಿಸಿ ಶರಣಪ್ಪ ಪಾಟೀಲ್, ಬಂಟ್ವಾಳ ಸಂಚಾರ ಠಾಣಾ ಪಿಸಿ ವಿವೇಕ್, ಪಿಸಿ ಕುಮಾರ್ ಕೆ, ಜಿಲ್ಲಾ ಗಣಕಯಂತ್ರ ವಿಭಾಗದ ಎಹೆಚ್ ಸಂಪತ್ ಕುಮಾರ್, ಸಿಪಿಸಿ ದಿವಾಕರ್, ವಾಹನ ಚಾಲಕ ಪ್ರವೀಣ್ ಹಾಗೂ ಪುತ್ತೂರು ಗ್ರಾಮಾಂತರ ಠಾಣೆಯ ಎಲ್ಲಾ ಅಧಿಕಾರಿ & ಸಿಬ್ಬಂದಿಗಳು ಈ ಕಾರ್ಯಚರಣೆಯಲ್ಲಿ ಪಾಲ್ಗೊಂಡಿದ್ದಾರೆ.