ಪುತ್ತೂರು: ಬೆದ್ರಾಳ ನಿವಾಸಿ ಮಂಗಳೂರು ಶ್ರೀನಿವಾಸ ಕಾಲೇಜಿನಲ್ಲಿ ಉಪನ್ಯಾಸಕರಾಗಿರುವ ದೀಪಕ್‌ರಾಜ್(32ವ)ರವರು ಮೇ 11ರಂದು ತಡ ರಾತ್ರಿ ಮಂಗಳೂರು ಆಸ್ಪತ್ರೆಯಲ್ಲಿ ನಿಧನರಾದರು.
ಅನಾರೋಗ್ಯದ ಹಿನ್ನೆಲೆಯಲ್ಲಿ ಮಂಗಳೂರು ಎ.ಜೆ ಅಸ್ಪತ್ರೆಯಲ್ಲಿ ದಾಖಲಾಗಿದ್ದ ದೀಪಕ್‌ರಾಜ್ ಅವರು ತೀವ್ರ ಉಸಿರಾಟದ ತೊಂದರೆಯಿಂದ ನಿಧನರಾಗಿದ್ದಾರೆ. ಅವರ ಕೋವಿಡ್ ವರದಿಯಲ್ಲಿ ಪಾಸಿಟಿವ್ ಬಂದಿದ್ದು, ಕೋವಿಡ್ ನಿಯಮವಾಳಿಯಂತೆ ಮೇ 12ರಂದು ಶಾಸಕರ ವಾರ್‌ರೂಮ್ ಮೂಲಕ ಪಿ.ಜಿ.ಜಗನ್ನಿವಾಸ ರಾವ್ ಅವರ ನೇತೃತ್ವದಲ್ಲಿ ಪುತ್ತೂರು ಮಡಿವಾಳ ಕಟ್ಟೆ ಸ್ಮಶಾನದಲ್ಲಿ ಅಂತ್ಯಸಂಸ್ಕಾರ ನಡೆಸಲಾಯಿತು. ಮೃತರು ಪತ್ನಿ, ಪುತ್ರ, ತಂದೆ, ತಾಯಿಯನ್ನು ಅಗಲಿದ್ದಾರೆ.