ವಿಟ್ಲ : ದಕ್ಷಿಣ ಕನ್ನಡ ಜಿಲ್ಲಾಪಂಚಾಯತ್ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ದಕ್ಷಿಣ ಕನ್ನಡ ಜಿಲ್ಲೆ , ಮಂಗಳೂರು ಇದರ ಆಶ್ರಯದಲ್ಲಿ ನಡೆದ ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿದ್ಯಾರ್ಥಿಗಳ ಜಿಲ್ಲಾಮಟ್ಟದ ಆಟೋಟ ಸ್ಪರ್ಧೆ 2023-24 ರ 14ರ ವಯೋಮಾನದ ಕರಾಟೆ ಸ್ಪರ್ಧೆಯಲ್ಲಿ ಸರಕಾರಿ ಪ್ರೌಢಶಾಲೆ ಆರ್.ಎಂ.ಎಸ್.ಎ ವಿಟ್ಲ ಪ್ರಾಥಮಿಕ ವಿಭಾಗದ 8ನೇ ತರಗತಿ ವಿದ್ಯಾರ್ಥಿನಿ ತ್ರಿಷಾ ಪಿ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿರುತ್ತಾಳೆ.
ಈಕೆ ಕರಾಟೆ ಶಿಕ್ಷಕ ಮಾಧವ ಅಳಿಕೆ ರವರ ಬಳಿ ತರಬೇತಿ ಪಡೆಯುತ್ತಿದ್ದಾಳೆ.