ಪುತ್ತೂರು : ಟ್ರ್ಯಾಕ್ಟರ್ – ಕಾರು ಮುಖಾಮುಖಿ ಡಿಕ್ಕಿಯಾದ ಘಟನೆ ನರಿಮೊಗರಿನ ಪಾಪೆತ್ತಡ್ಕ ಸಮೀಪ ನಡೆದಿದೆ.

ಅಪಘಾತದ ತೀವ್ರತೆಗೆ ಟ್ರ್ಯಾಕ್ಟರ್ ನಜ್ಜುಗುಜ್ಜಾಗಿದ್ದು, ಕಾರಿನ ಏರ್ ಬ್ಯಾಗ್ ತೆರೆದುಕೊಂಡಿದ್ದು, ಹಾನಿಯಾಗಿದೆ.
ಟ್ರ್ಯಾಕ್ಟರ್ ಚಾಲಕ ಪವಾಡಸದೃಶ ಪಾರಾಗಿದ್ದು, ಸಣ್ಣಪುಟ್ಟ ಗಾಯಗೊಂಡಿದ್ದಾರೆ.
ಕಾರು ಬೆಂಗಳೂರುನಿಂದ ಕಾಣಿಯೂರು ಮಾರ್ಗವಾಗಿ ಪುತ್ತೂರಿಗೆ ಬರುತ್ತಿದ್ದು, ಕಾರಿನಲ್ಲಿದ್ದ 5 ಮಂದಿ ಅಪಾಯದಿಂದ ಪಾರಾಗಿದ್ದಾರೆ.
ಗಾಯಾಳುಗಳನ್ನು ವಿಶ್ವನಾಥ್ ಹಾಗೂ ಹಿಂದೂ ಮುಖಂಡ ಅರುಣ್ ಕುಮಾರ್ ಪುತ್ತಿಲ ರವರ ಕಾರಿನಲ್ಲಿ ಆಸ್ಪತ್ರೆಗೆ ಕರೆದೊಯ್ಯಲಾಯಿತು..