ಪುತ್ತೂರು : ದಕ್ಷಿಣ ಕನ್ನಡ ಜಿಲ್ಲಾ ಅಮೆಚೂರು ಕಬಡ್ಡಿ ಅಸೋಸಿಯೇಶನ್ ಮತ್ತು ಪುತ್ತೂರು ತಾಲೂಕು ಅಮೆಚೂರು ಕಬಡ್ಡಿ ಅಸೋಸಿಯೇಶನ್ ಆಶ್ರಯದಲ್ಲಿ, ಶ್ರೀ ಗಣೇಶೋತ್ಸವದ ಪ್ರಯುಕ್ತ, ಅಂತರಾಷ್ಟ್ರೀಯ ಕಬಡ್ಡಿ ಆಟಗಾರ ದಿ. ಉದಯ ಚೌಟ ಸ್ಮರಣಾರ್ಥ ಸೆ.30 ರಂದು ಕಿಲ್ಲೆ ಮೈದಾನದಲ್ಲಿ ಮ್ಯಾಟ್ ಅಂಕಣದಲ್ಲಿ ನಡೆದ ಆಹ್ವಾನಿತ ತಂಡಗಳ ಪುರುಷರ ವಿಭಾಗದ ಪ್ರೊ ಕಬಡ್ಡಿ ಮಾದರಿಯ ‘ಅಹರ್ನಿಶಿ’ ಕಬಡ್ಡಿ ಪಂದ್ಯಾಟದಲ್ಲಿ ‘ಹೊಳ್ಳ ಕ್ರ್ಯಾಕರ್ಸ್’ ತಂಡವು ಪ್ರಥಮ ಸ್ಥಾನವನ್ನು ಪಡೆದಿದೆ.
ಕಬಡ್ಡಿ ಪಂದ್ಯಾಟವು ಗಣೇಶೋತ್ಸವದ ಪೆಂಡಾಲ್ ನಲ್ಲಿ ಅತ್ಯಂತ ಸುಂದರವಾಗಿ ಮೂಡಿಬಂದಿತು.
ಪಂದ್ಯಾಕೂಟವನ್ನು ಮತ್ತಷ್ಟು ಆಕರ್ಷಣೀಯವಾಗಿಸಲು ಪ್ರದರ್ಶನ ಪಂದ್ಯಾಟವನ್ನು ಏರ್ಪಡಿಸಲಾಗಿತ್ತು.