ಪುತ್ತೂರು : ಆಕ್ಟಿವಾ ಸ್ಕೂಟರಿಗೆ 800 ಕಾರು ಡಿಕ್ಕಿಯಾಗಿ ಪರಾರಿಯಾದ ಘಟನೆ ನಡೆದಿದೆ.
ಸ್ಕೂಟರ್‌ನಲ್ಲಿ ತೆರಳುತ್ತಿದ್ದ ಗ್ರಾ.ಪಂ ಸದಸ್ಯರಿಬ್ಬರಿಗೆ ಗಾಯಗಳಾಗಿವೆ.
ಒಳಮೊಗ್ರು ಗ್ರಾಪಂ ಸದಸ್ಯರಾದ ಶೀನಪ್ಪ ನಾಯ್ಕ ಹಾಗೂ ಚಿತ್ರ ಅವರು ಆಕ್ಟಿವಾ ಸ್ಕೂಟರಿನಲ್ಲಿ ತೆರಳುವಾಗ ಕುಂಬ್ರ ಸಮೀಪ ಕಾರು ಡಿಕ್ಕಿ ಹೊಡೆದಿದೆ.
ಅಪಘಾತಕ್ಕೆ ಸ್ಕೂಟರ್ ಪಲ್ಟಿಯಾಗಿದೆ. ಕಾರು ಚಾಲಕ ಕಾರನ್ನು ನಿಲ್ಲಿಸದೆ ಎಸ್ಕೆಪ್ ಆಗಿದ್ದಾನೆ ಎನ್ನಲಾಗಿದೆ.
ಗಾಯಾಳುಗಳಿಬ್ಬರು ಪುತ್ತೂರು ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.