ಮಂಗಳೂರು : ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಜನಮನ್ನಣೆಗಳಿಸಿದ ಖಾಸಗಿ ಬಸ್ಸೊಂದರ ಮಾಲಕ ಆತ್ಮಹತ್ಯೆ ಮಾಡಿಕೊಂಡ ಬಗ್ಗೆ ವರದಿಯಾಗಿದೆ.
ಮಹೇಶ್ ಬಸ್ ಮಾಲಕ ಪ್ರಕಾಶ್ (40) ಮೃತರು.

ಮಹೇಶ್ ಬಸ್ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಪ್ರತಿನಿತ್ಯ ಓಡಾಡುತ್ತಿದ್ದು, ಜನಮನ್ನಣೆಗಳಿಸಿದ ಖಾಸಗಿ ಬಸ್ ಗಳಲ್ಲಿ ಒಂದಾಗಿದೆ.
ಮರಣೋತ್ತರ ಪರೀಕ್ಷೆಗಾಗಿ ಮೃತದೇಹವನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ಕೊಂಡೊಯ್ಯಲಾಗಿದೆ.

ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದು ಬರಬೇಕಿದೆ..