ಬೆಳ್ತಂಗಡಿ: ತಾಲೂಕು ಸಾರ್ವಜನಿಕ ಆಸ್ಪತ್ರೆಯಲ್ಲಿ ದಾದಿಯರ ದಿನಾಚರಣೆ ಕಾರ್ಯಕ್ರಮ ಮೇ.12 ರಂದು ಆಸ್ಪತ್ರೆಯ ಆವರಣದಲ್ಲಿ ಜರುಗಿತು.
ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಶಾಸಕ ಹರೀಶ್ ಪೂಂಜರವರು ತಾಲೂಕು ಆಸ್ಪತ್ರೆಯಲ್ಲಿ ಸೇವೆ ಸಲ್ಲಿಸುತ್ತಿರುವ ಒಟ್ಟು 22 ಮಂದಿ ದಾದಿಯರಿಗೆ ತಲಾ.10 ಸಾವಿರದಂತೆ ಸಹಾಯಧನವನ್ನು ವಿತರಿಸಿದರು. ನಂತರ ಮಾತನಾಡಿದ ಅವರು ಕೊರೊನಾ ಸಂದರ್ಭದಲ್ಲಿ ಎಲ್ಲಾ ಆಸ್ಪತ್ರೆಗಳಲ್ಲಿ ದಾದಿಯರು ತಮ್ಮ ಜೀವದ ಹಂಗು ತೊರೆದು ಹಗಲು ರಾತ್ರಿಯೆನ್ನದೆ ರೋಗಿಗಳಿಗೆ ಚಿಕಿತ್ಸೆ ನೀಡುತ್ತಿದ್ದು,
ಪ್ರಾಮಾಣಿಕವಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಅವರಿಗೆ ಈ ಸಹಾಯಧನವನ್ನು ನೀಡಿ ಶಕ್ತಿ ತುಂಬುವ ಕಾರ್ಯ ನಡೆದಿದೆ. ಇನ್ನು ಮುಂದಕ್ಕೂ ದಾದಿಯರಿಗೆ ಯಾವುದೇ ಸಂದರ್ಭದಲ್ಲಿ ಏನೇ ಸಹಾಯಬೇಕಿದ್ದರೂ ನೀಡಲು ನಾವು ಸದಾ ಸಿದ್ಧರಾಗಿದ್ದೇವೆ ಎಂದರು.
ಈ ಸಂದರ್ಭದಲ್ಲಿ ತಾಲೂಕು ಆರೋಗ್ಯಾಧಿಕಾರಿ ಡಾ| ಕಲಾಮಧು, ಪಟ್ಟಣ ಪಂಚಾಯತ್ ಉಪಾಧ್ಯಕ್ಷ ಜಯಾನಂದ ಗೌಡ, ಪ.ಪಂ ಸದಸ್ಯ ಶರತ್ ಕುಮಾರ್, ಬಿಜೆಪಿ ಮಂಡಲ ಪ್ರಧಾನ ಕಾರ್ಯದರ್ಶಿಗಳಾದ ಶ್ರೀನಿವಾಸ ರಾವ್, ಎನ್ ಗಣೇಶ್, ಮೇಲಂತಬೆಟ್ಟು ಗ್ರಾ.ಪಂ ಸದಸ್ಯ ಚಂದ್ರರಾಜ್, ಲಾಯಿಲ ಗ್ರಾ.ಪಂ ಸದಸ್ಯ ಅರವಿಂದ, ಆಸ್ಪತ್ರೆಯ ವೈದ್ಯರು, ದಾದಿಯರು, ಸಿಬ್ಬಂದವರ್ಗದವರು ಉಪಸ್ಥಿತರಿದ್ದರು.