ಪುತ್ತೂರು : ಅಕ್ಷಯ ಕಾಲೇಜು ಪುತ್ತೂರು ರಾಷ್ಟ್ರೀಯ ಸೇವಾ ಯೋಜನಾ ಘಟಕದ ವತಿಯಿಂದ ” ಏಕ್ ತಾರಿಕ್,ಏಕ್ ಘಂಟಾ” ಎಂಬ ಶಿರೋನಾಮೆಯಲ್ಲಿ ಸ್ವಚ್ಛತಾ ಅಭಿಯಾನ ಕಾರ್ಯಕ್ರಮವು ಸಂಪ್ಯ ವಠಾರದಲ್ಲಿ ನಡೆಯಿತು.

ಕಾಲೇಜಿನ ಅಧ್ಯಕ್ಷರಾದ ಜಯಂತ್ ನಡುಬೈಲು ಅವರು ಅಭಿಯಾನಕ್ಕೆ ಚಾಲನೆ ನೀಡಿದರು.

ಕಾಲೇಜಿನ ಪ್ರಾಂಶುಪಾಲರಾದ ಸಂಪತ್ ಪಕ್ಕಳ, ರಾಷ್ಟ್ರೀಯ ಸೇವಾ ಯೋಜನಾ ಘಟಕದ ಕಾರ್ಯಕ್ರಮಾಧಿಕಾರಿಗಳಾದ ಕಿಶೋರ್ ರೈ, ಮೇಘಶ್ರೀ ಹಾಗೂ ಕಾಲೇಜಿನ ಉಪನ್ಯಾಸಕ ವೃಂದದವರು ಹಾಗೂ ಸ್ವಯಂ ಸೇವಕ, ಸೇವಕಿಯರು ಈ ಅಭಿಯಾನದಲ್ಲಿ ಭಾಗವಹಿಸಿದ್ದರು.


