ಬೆಂಗಳೂರು : ಈ ಬಾರಿ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಕಂಬಳ ನಡೆಯಲಿದ್ದು, ಈ ಹಿನ್ನೆಲೆ ಇಂದು (ಅ.6) ಕಂಬಳ ಸಮಿತಿ ವತಿಯಿಂದ ಪೂರ್ವಭಾವಿ ಸಭೆ ನಡೆಯಿತು.

ಸಮಿತಿ ಮುಖ್ಯಸ್ಥರಾದ ಶಾಸಕ ಅಶೋಕ್ ಕುಮಾರ್ ರೈ, ಖ್ಯಾತ ಗಾಯಕ ಗುರು ಕಿರಣ್ ಹಾಗೂ ಉದ್ಯಮಿ ಬಿ. ಗುಣರಂಜನ್ ಶೆಟ್ಟಿ ರವರ ಮಾರ್ಗದರ್ಶನದಲ್ಲಿ ಸಭೆ ನಡೆಯಿತು.

ಕರಾವಳಿ ಭಾಗದ ಸಾಂಸ್ಕೃತಿಕ ಕ್ರೀಡೆಯಾಗಿರುವ ಕಂಬಳ ಇದೇ ಮೊದಲ ಬಾರಿಗೆ ಬೆಂಗಳೂರಿನಲ್ಲಿ ನಡೆಯಲಿದೆ. ಅರಮನೆ ಮೈದಾನದಲ್ಲಿ ನವೆಂಬರ್ 25 ಮತ್ತು 26ರಂದು ಕಂಬಳ ನಡೆಯಲಿದೆ. ದಕ್ಷಿಣ ಕನ್ನಡ, ಉಡುಪಿ, ಕಾಸರಗೋಡು ಮತ್ತು ಇತರ ಜಿಲ್ಲೆಗಳಿಂದ ಸುಮಾರು 130 ಜೋಡಿ ಕೋಣಗಳು ಕಂಬಳದಲ್ಲಿ ಭಾಗವಹಿಸಲಿವೆ.

ಎರಡು ದಿನಗಳ ಕಾಲ ಕಂಬಳ ನಡೆಯಲಿದ್ದು, ಸುಮಾರು 7-8 ಲಕ್ಷ ಜನ ವೀಕ್ಷಣೆಗೆ ಸೇರುವ ನಿರೀಕ್ಷೆ ಮಾಡಲಾಗಿದೆ. ಇದಕ್ಕಾಗಿ ಎಲ್ಲಾ ಸಿದ್ಧತೆಗಳು ಭರದಿಂದ ಸಾಗುತ್ತಿವೆ..


























