ಪುತ್ತೂರು : ಹೋಟೆಲ್ ವೊಂದರಲ್ಲಿ ಅಗ್ನಿ ಅವಘಡ ಸಂಭವಿಸಿದ ಘಟನೆ ಪಡೀಲ್ ಬಳಿ ನಡೆದಿದೆ.

ಪಡೀಲ್ ನಲ್ಲಿರುವ ಹೋಟೆಲ್ ನ ಗ್ಯಾಸ್ ಸಿಲಿಂಡರ್ ಗೆ ಬೆಂಕಿ ತಗುಲಿದ ಪರಿಣಾಮ ಹೋಟೆಲ್ ನಲ್ಲಿ ಅಗ್ನಿ ಅವಘಡ ಸಂಭವಿಸಿದೆ.

ಘಟನೆ ಬಗ್ಗೆ ತಿಳಿಯುತ್ತಿದ್ದಂತೆ ಸ್ಥಳದಲ್ಲಿ ಹಲವಾರು ಮಂದಿ ಜಮಾಯಿಸಿದ್ದು, ಸ್ಥಳೀಯರೆಲ್ಲ ಸೇರಿಕೊಂಡು ಗ್ಯಾಸ್ ಸಿಲಿಂಡರ್ ಗೆ ತಗುಲಿದ ಬೆಂಕಿಯನ್ನು ನಂದಿಸಿದ್ದಾರೆನ್ನಲಾಗಿದೆ.
ಘಟನೆಯ ಬಗ್ಗೆ ತಿಳಿಯುತ್ತಿದ್ದಂತೆ ಅಗ್ನಿಶಾಮಕದಳದವರು ಸ್ಥಳಕ್ಕೆ ಆಗಮಿಸಿದ್ದಾರೆಂದು ತಿಳಿದು ಬಂದಿದೆ.



























