ಪುತ್ತೂರು : ಕೋವಿಡ್-19 ಎರಡನೇ ಅಲೆಯನ್ನು ನಿಯಂತ್ರಿಸುವ ನಿಟ್ಟಿನಲ್ಲಿ ಉಸ್ತುವಾರಿ ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ ಅವರು ಪುತ್ತೂರು ಸರಕಾರಿ ಆಸ್ಪತ್ರೆಗೆ ಭೇಟಿ ನೀಡಿ ಅಧಿಕಾರಿಗಳ ಸಭೆ ನಡೆಸಿದರು.
ಪುತ್ತೂರು ಶಾಸಕರಾದ ಸಂಜೀವ ಮಠಂದೂರು ರವರ ಮನವಿ ಮೇರೆಗೆ ಜಿಲ್ಲಾಧಿಕಾರಿಗಳ ಮುಖಾಂತರ ತಕ್ಷಣ ಆಸ್ಪತ್ರೆಗೆ 30 ಆಕ್ಸಿಜನ್ ಸಿಲಿಂಡರ್ ಗಳ ವ್ಯವಸ್ಥೆ ಮಾಡಿದರು. ಹಾಗೆಯೇ ಆಸ್ಪತ್ರೆಗೆ ಹಲವು ಅವಶ್ಯಕತೆಯ ಬಗ್ಗೆ ಚರ್ಚಿಸಿದರು. ಈ ಸಂದರ್ಭದಲ್ಲಿ ಅಧಿಕಾರಿ ವರ್ಗದವರು ಹಾಗೂ ಆಸ್ಪತ್ರೆ ಸಿಬ್ಬಂದಿಗಳು ಉಪಸ್ಥಿತರಿದ್ದರು.