ವಿಟ್ಲ : ನಂದಿಕೂರಿನಿಂದ ಕಾಸರಗೋಡಿಗೆ ಹೋಗುವ 400ಕೆ.ವಿ ಹೈ ಟೆನ್ಶನ್ ಮಾರ್ಗವನ್ನು ಪುಣಚ ಗ್ರಾಮದ ಬೈರಿಕಟ್ಟೆಯಿಂದ ಕಾಮಗಾರಿ ಆರಂಭ ಮಾಡಲು ಮುಂದಾದಾಗ ಪರಿಸರದ ರೈತ ವರ್ಗದವರು ಪ್ರತಿಭಟಿಸಿದ ಘಟನೆ ನಡೆದಿದೆ.

ವಿಷಯ ತಿಳಿದು ಪುತ್ತೂರು ಮಾಜಿ ಶಾಸಕರಾದ ಸಂಜೀವ ಮಠಂದೂರು ಸ್ಥಳಕ್ಕೆ ಭೇಟಿ ನೀಡಿ ಜಿಲ್ಲಾಧಿಕಾರಿಗಳನ್ನು ಸಂಪರ್ಕಿಸಿ ತಕ್ಷಣ ಕಾಮಗಾರಿಗಳನ್ನು ನಿಲ್ಲಿಸಬೇಕು ಮತ್ತು ಈ ಭಾಗದ ರೈತರ ಸಭೆ ಕರೆದು ಚರ್ಚಿಸಬೇಕು ಎಂದರು.
ಇದಕ್ಕೆ ಸ್ಪಂದಿಸಿದ ಡಿ.ಸಿಯವರು ಕಾಮಗಾರಿಯನ್ನು ಈ ಕೂಡಲೇ ನಿಲ್ಲಿಸುವಂತೆ ಬಂಟ್ವಾಳ ತಹಶೀಲ್ದಾರ್ ರವರಿಗೆ ಸೂಚಿಸಿದರು.

ಈ ಸಂದರ್ಭದಲ್ಲಿ ಪುತ್ತೂರು ಮಂಡಲ ಬಿಜೆಪಿ ಉಪಾಧ್ಯಕ್ಷರಾದ ಹರಿಪ್ರಸಾದ್ ಯಾದವ್,ವಿಟ್ಲ ಬಿಜೆಪಿ ಪ್ರಮುಖರಾದ ಕರುಣಾಕರ ನಾಯ್ತೊಟ್ಟು,ಪುಣಚ ಪಂಚಾಯತ್ ಸದಸ್ಯರಾದ ಅಶೋಕ್ ಮೂಡಂಬೈಲು, ತೀರ್ಥರಾಮ್, ರೈತ ಮುಖಂಡರಾದ ಸಂಜೀವ ಗೌಡ ಮೊದಲಾದವರು ಉಪಸ್ಥಿತರಿದ್ದರು.

























