ಮಾಣಿ: ಮಂಗಳೂರು- ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75 ಹಾಗೂ ಮಾಣಿ- ಮೈಸೂರು ರಾಷ್ಟ್ರೀಯ ಹೆದ್ದಾರಿ 275 ಸಂದಿಸುವ ಮಾಣಿ ಜಂಕ್ಷನ್ ನಲ್ಲಿ ವಾಹನ ಸವಾರರ ಸುರಕ್ಷತೆಯ ಹಿತ ದೃಷ್ಟಿಯಿಂದ ವಿಟ್ಲ ಪೊಲೀಸ್ ಠಾಣೆಯ ಸಬ್ ಇನ್ಸ್ಪೆಕ್ಟರ್ ವಿನೋದ್ ರೆಡ್ಡಿಯವರ ನೇತೃತ್ವದಲ್ಲಿ, ಊರ ನಾಗರಿಕರ ಸಂಪೂರ್ಣ ಸಹಕಾರದೊಂದಿಗೆ ರಸ್ತೆ ವಿಭಾಜಕಗಳನ್ನು ಅಳವಡಿಸಲಾಯಿತು.
ಈ ಸಂದರ್ಭದಲ್ಲಿ ಸ್ಥಳೀಯ ಸಾಮಾಜಿಕ ಕಾರ್ಯಕರ್ತರು ಉಪಸ್ಥಿತರಿದ್ದು, ಎರಡು ಹೆದ್ದಾರಿಗಳು ಸಂದಿಸುವ ಜಾಗದಲ್ಲಿ ಈ ರಸ್ತೆ ವಿಭಾಜಕದ ನಿರ್ಮಾಣ ಮುಂದಿನ ದಿನಗಳಲ್ಲಿ ರಸ್ತೆಯಲ್ಲಿ ವಾಹನಗಳ ವ್ಯವಸ್ಥಿತ ಓಡಾಟಕ್ಕೆ ಅನುವು ಮಾಡಿಕೊಡಲಿದೆ ಎಂದರು.