ಮಂಗಳೂರು : ಉಳ್ಳಾಲ ಮೂಲದ ನವವಿವಾಹಿತೆಯೊಬ್ಬರು ಅನುಮಾನಾಸ್ಪದ ಸಾವಿಗೀಡಾದ ಘಟನೆ ನಡೆದಿದೆ.
ತೌಡುಗೋಳಿ ಕ್ರಾಸ್ ಗುರಿಕಾರಮೂಲೆ ನಿವಾಸಿ ನಾರಾಯಣ ಶೆಟ್ಟಿ ಅವರ ಪುತ್ರಿ ಸುಜಾತ ಶೆಟ್ಟಿ (38) ಮೃತ ಮಹಿಳೆ.

ನಾಲ್ಕು ತಿಂಗಳ ಹಿಂದೆಯಷ್ಟೇ ಪಜೀರು ಪಾನೇಲ ನಿವಾಸಿ ಪುಣೆಯಲ್ಲಿ ಕ್ಯಾಂಟೀನ್ ನಡೆಸುತ್ತಿದ್ದ ಸುರೇಶ್ ಕೈಯ್ಯ ಎಂಬವರಿಗೆ ಮದುವೆ ಮಾಡಿ ಕೊಡಲಾಗಿತ್ತು. ಸುಜಾತ ಮೃತದೇಹ ಭಾರತೀಯ ವಿದ್ಯಾಪೀಠದಲ್ಲಿರುವ ಮನೆಯೊಳಗೆ ಅ.8 ರಂದು ಅನುಮಾನಸ್ಪದ ರೀತಿಯಲ್ಲಿ ಕಂಡುಬಂದಿತ್ತು.
ಈ ಬಗ್ಗೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಮೃತದೇಹವನ್ನು ಮಹಜರಿಗೆ ಕಳುಹಿಸಲಾಗಿತ್ತು. ಉಳ್ಳಾಲದ ತೌಡುಗೋಳಿಯ ಲ್ಲಿ ಅ.9 ರಂದು ಸುಜಾತ ಅವರ ಅಂತ್ಯಸಂಸ್ಕಾರ ನಡೆದಿದೆ.
ಸುಜಾತಾ ಅವರು ಈ ಮೊದಲು ತೊಕ್ಕೊಟ್ಟು ಬ್ಯೂಟಿಪಾರ್ಲರ್ ನಲ್ಲಿ ಬ್ಯೂಟೀಷಿಯನ್ ಆಗಿ ಕೆಲಸ ಮಾಡುತ್ತಿದ್ದು, ಸುಜಾತ ಸಾವಿನ ಹಿಂದೆ ಗಂಡನ ಕೈವಾಡವಿರಬಹುದೆಂಬ ಹಿನ್ನೆಲೆ, ಸುಜಾತ ಕುಟುಂಬ ಸುರೇಶ್ ವಿರುದ್ಧ ಅನುಮಾನ ವ್ಯಕ್ತಪಡಿಸಿದ್ದಾರೆ.
ಮರಣೋತ್ತರ ಪರೀಕ್ಷೆಯ ವರದಿ ಬಂದ ಬಳಿಕವಷ್ಟೇ ಸುಜಾತ ಸಾವಿನ ಪ್ರಕರಣದ ಸತ್ಯಾಸತ್ಯತೆ ಹೊರಬೀಳಲಿದೆ.

























