ಪುತ್ತೂರು: ಕೆಮ್ಮಿಂಜೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ನೂತನ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾಗಿ ಕೆಮ್ಮಿಂಜೆ ತಂತ್ರಿ ಸುಬ್ರಹ್ಮಣ್ಯ ಬಳ್ಳಕ್ಕುರಾಯರವರು ಆಯ್ಕೆ
![](https://zoomintv.online/wp-content/uploads/2020/11/WhatsApp-Image-2020-11-11-at-4.26.32-PM-1024x768.jpeg)
ಜಿಲ್ಲಾ ಧಾರ್ಮಿಕ ಪರಿಷತ್ತಿನ ಸದಸ್ಯ ಮುರಳಿಕೃಷ್ಣ ಹಸಂತ್ತಡ್ಕ ಹಾಗೂ ದೇವಸ್ಥಾನದ ಆಡಳಿತಾಧಿಕಾರಿ ಸುಲೋಚನಾ ಪಿ. ಕೆ. ರವರ ನೇತೃತ್ವದಲ್ಲಿ ದೇವಸ್ಥಾನದಲ್ಲಿ ಸಭೆ ನಡೆಸಿ ನೂತನ ಅಧ್ಯಕ್ಷರ ಆಯ್ಕೆ ಪ್ರಕ್ರಿಯೆ ನಡೆಸಲಾಯಿತು. ಈ ಸಂದರ್ಭದಲ್ಲಿ ಬಂಟರ ಸಂಘದ ಅಧ್ಯಕ್ಷ ಬೂಡಿಯಾರು ರಾಧಾಕೃಷ್ಣ ರೈ, ನಗರಸಭಾ ಸದಸ್ಯ ಪಿ. ಜಿ. ಜಗನ್ನಿವಾಸ ರಾವ್, ಬಾಲಚಂದ್ರ, ಮಮತಾ ರಂಜನ್, ವ್ಯವಸ್ಥಾಪನಾ ಸಮಿತಿ ಸದಸ್ಯರು ಮತ್ತಿತರರು ಉಪಸ್ಥಿತರಿದ್ದರು.
![](https://zoomintv.online/wp-content/uploads/2020/11/WhatsApp-Image-2020-11-11-at-4.26.32-PM-1-1024x461.jpeg)