ಬಂಟ್ವಾಳ : ಕಾರು ಡಿಕ್ಕಿಯಾಗಿ ಯುವತಿ ಸಾವನ್ನಪ್ಪಿದ ಘಟನೆಗೆ ಸಂಬಂಧಿಸಿದಂತೆ ಬಂಟ್ವಾಳ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಚಂದ್ರಶೇಖರ ಎಂಬವರು ನೀಡಿದ ದೂರಿನ ಮೇರೆಗೆ ಕಾರು ಚಾಲಕನ ವಿರುದ್ಧ ಪ್ರಕರಣ ದಾಖಲಾಗಿದೆ.
ವೀರಕಂಭ ಗ್ರಾಮದ ಬಾಯಿಲ ನಿವಾಸಿ ಶೇಖರ ಪೂಜಾರಿ ಅವರ ಪುತ್ರಿ ಪಾವನ (23) ಮೃತ ಯುವತಿ.
ಅ.12 ರಂದು ಸಂಜೆ ಬಂಟ್ವಾಳ ತಾಲೂಕು ಬಾಳ್ತಿಲ ಗ್ರಾಮದ ದಾಸಕೋಡಿ ಎಂಬಲ್ಲಿ ಮಂಗಳೂರು-ಬೆಂಗಳೂರು ರಾಷ್ಟೀಯ ಹೆದ್ದಾರಿಯಲ್ಲಿ ಕಾರನ್ನು ಅದರ ಚಾಲಕ ನಿರ್ಲಕ್ಷತನದಿಂದ ಚಲಾಯಿಸಿಕೊಂಡು ಬಂದು ರಸ್ತೆಯ ಪಕ್ಕದಲ್ಲಿ ನಡೆದುಕೊಂಡು ಹೋಗುತ್ತಿದ್ದ ಪಾದಚಾರಿ ಪವನಾ ಎಂಬವರಿಗೆ ಡಿಕ್ಕಿಯನ್ನುಂಟು ಮಾಡಿದ್ದು, ಅಪಘಾತದ ಪರಿಣಾಮ ರಸ್ತೆಯ ಬದಿಯಲ್ಲಿದ್ದ ಗುಂಡಿಯೊಂದಕ್ಕೆ ಬಿದ್ದ ಪವನಾ ರವರಿಗೆ ತೀವ್ರ ಗಾಯಗಳಾಗಿದ್ದು, ಆಂಬುಲೆನ್ಸ್ ಮೂಲಕ ಚಿಕಿತ್ಸೆಗಾಗಿ ಬಂಟ್ವಾಳ ಸರಕಾರಿ ಆಸ್ಪತ್ರೆಗೆ ಕರೆದುಕೊಂಡು ಹೋದಾಗ ಅಲ್ಲಿನ ವೈದ್ಯರು ಪರೀಕ್ಷಿಸಿ ಮೃತಪಟ್ಟಿರುವುದಾಗಿದೆ ತಿಳಿಸಿರುತ್ತಾರೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.
ಈ ಬಗ್ಗೆ ಬಂಟ್ವಾಳ ಸಂಚಾರ ಪೊಲೀಸ್ ಠಾಣೆಯಲ್ಲಿ ಅ.ಕ್ರ 141/2023 ಕಲಂ: 279, 304(ಎ) ಐಪಿಸಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.