ಪುತ್ತೂರು : ನನ್ನ ರಾಜಕೀಯ ಮತ್ತು ಸಾಮಾಜಿಕ ಜೀವನದಲ್ಲಿ ಏನೇ ನಿರ್ಧಾರ ತೆಗೆದುಕೊಳ್ಳುವುದಿದ್ದರೂ ನನ್ನ ಕಾರ್ಯಕರ್ತರ ಅಭಿಪ್ರಾಯದಂತೆ ತೆಗೆದು ಕೊಳ್ಳುತ್ತೇನೆ. ಸಾಮಾಜಿಕ ಜಾಲತಾಣದಲ್ಲಿ ಮತ್ತು ಮಾಧ್ಯಮಗಳಲ್ಲಿ ಬಂದಂತೆ ಯಾವುದೇ ರೀತಿಯ ನಿರ್ಧಾರವೂ ನಡೆದಿಲ್ಲ ಎಂದು ಪುತ್ತಿಲ ಪರಿವಾರದ ಅರುಣ್ ಕುಮಾರ್ ಪುತ್ತಿಲ ಸ್ಪಷ್ಟನೆ ನೀಡಿದ್ದಾರೆ.
ಕಾರ್ಯಕರ್ತರ ಒತ್ತಾಯದಂತೆ 2023ರ ವಿಧಾನಸಭಾ ಚುನಾವಣೆಗೆ ನಾನು ಸ್ಪರ್ಧಿಸಿದ್ದೆ. ನನ್ನ ಮುಂದಿನ ಯಾವುದೇ ನಿರ್ಧಾರ ತೆಗೆದುಕೊಳ್ಳುವುದಿದ್ದರೂ ನನ್ನ ಶಕ್ತಿ ಹಾಗೂ ಹಿತೈಷಿಗಳಾದ ಕಾರ್ಯಕರ್ತರ ಜೊತೆ ಮಾತುಕತೆ ನಡೆಸಿ ಅವರ ಇಚ್ಚೆಯಂತೆ ಮುಂದಿನ ಹೆಜ್ಜೆ ಇಡುತ್ತೇನೆ.
ಯಾವುದೇ ಗೊಂದಲಗಳಿಗೂ ಕಿವಿಗೊಡಬೇಡಿ ಎಂದು ಅರುಣ್ ಕುಮಾರ್ ಪುತ್ತಿಲ ಸ್ಪಷ್ಟನೆ ನೀಡಿದ್ದಾರೆ.



























