ಮಂಗಳೂರು : ಕೊರೋನಾ ಲಾಕ್ ಡೌನ್ ಸಂಕಷ್ಟದ ಸಮಯದಲ್ಲಿ ಬಡವರು ಪಡೆದ ಸಾಲದ ಕಂತು ಪಾವತಿಯನ್ನು ತಾತ್ಕಾಲಿಕವಾಗಿ ಮುಂದೂಡಬೇಕೆಂದು ದ.ಕ. ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ್ ಪೂಜಾರಿ ಸಿಎಂ ಬಿಎಸ್ ಯಡಿಯೂರಪ್ಪ ಅವರಿಗೆ ಮನವಿ ಮಾಡಿದ್ದಾರೆ.
ರಾಜ್ಯದ ವಿವಿಧ ಮೂಲಗಳಿಂದ ಸಾಲ ಪಡೆದ ಬಡವರು, ರೈತರು, ಕೂಲಿಕಾರ್ಮಿಕರು ಸೇರಿದಂತೆ ಅನೇಕರು ಕೋವಿಡ್‍ನ ಸಂಕಷ್ಟ ಕಾಲದಲ್ಲಿ ಸಾಲ ಮರುಪಾವತಿಸಲಾಗದಷ್ಟು ಆರ್ಥಿಕವಾಗಿ ಕಂಗೆಟ್ಟಿದ್ದಾರೆ ಇಂತಹ ಸಂದಿಗ್ಧ ಸ್ಥಿತಿಯಲ್ಲಿ ವಿವಿಧ ಹಣಕಾಸು ಸಂಸ್ಥೆಗಳು ಹಾಗೂ ಖಾಸಗಿ ಲೇವಾದೇವಿದಾರರು ಸಾಲದ ಮರುಪಾವತಿಗೆ ಒತ್ತಾಯಿಸುತ್ತಿದ್ದು, ಬಡಜನರು ಸಾಲಮರುಪಾತಿಸಲು ಶಕ್ತರಿರುವುದಿಲ್ಲ.
ಈ ಹಿನ್ನೆಲೆಯಲ್ಲಿ ರಾಜ್ಯದ ಎಲ್ಲಾ ಬ್ಯಾಂಕ್‍ಗಳು ಹಾಗೂ ಇತರ ಹಣಕಾಸು ಸಂಸ್ಥೆಗಳು ಮತ್ತು ಸಾಲ ನೀಡಿದ ಎಲ್ಲಾ ಸಂಸ್ಥೆಗಳು ಸಾಲ ವಸೂಲಿ ಮಾಡಲು ಇನ್ನು 6 ತಿಂಗಳ ಅವಧಿ ಮುಂದೂಡಿ ಆದೇಶ ಹೊರಡಿಸಬೇಕು ಎಂದು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವಕೋಟ ಶ್ರೀನಿವಾಸ ಪೂಜಾರಿ, ಮುಖ್ಯಮಂತ್ರಿಗಳಿಗೆ ಮನವಿ ಮಾಡಿದ್ದಾರೆ.