ಮಂಗಳೂರು : ಪಾರ್ಟ್‌ಟೈಂ ಉದ್ಯೋಗ ನೀಡುವುದಾಗಿ ಹೇಳಿ ಟೆಲಿಗ್ರಾಂ ಆ್ಯಪ್ ಮೂಲಕ ಲಿಂಕ್ ಕಳುಹಿಸಿ 40.97 ಲ.ರೂ.ಗಳನ್ನು ವರ್ಗಾಯಿಸಿಕೊಂಡು ವಂಚಿಸಿರುವ ಬಗ್ಗೆ ಮಂಗಳೂರಿನ ಸೆನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ದೂರುದಾರರಿಗೆ ಸೆ.14ರಂದು ಅಪರಿಚಿತ ವ್ಯಕ್ತಿ ಟೆಲಿಗ್ರಾಂ ಮೂಲಕ ಲಿಂಕ್ ಕಳುಹಿಸಿದ್ದ. ಟಾಸ್ಕ್ಗಳನ್ನು ಪೂರ್ಣಗೊಳಿಸಿ ಹಣ ನೀಡುವುದಾಗಿ ತಿಳಿಸಿದ. ಮೊದಲಿಗೆ 200 ರೂ.ಗಳನ್ನು ದೂರುದಾರರ ಖಾತೆಗೆ ಕಳುಹಿಸಿದ. ಅನಂತರ ಸೆ.14ರಿಂದ ಅ.16ರ ವರೆಗೆ ಹಂತಹಂತವಾಗಿ ಒಟ್ಟು 40.97 ಲ.ರೂ.ಗಳನ್ನು ದೂರುದಾರರ ಖಾತೆಯಿಂದ ವರ್ಗಾಯಿಸಿಕೊಂಡು ವಂಚಿಸಿದ್ದಾನೆ.

























