ಬೆಂಗಳೂರು : ಒರಿಜಿನಲ್ ಜೆಡಿಎಸ್ ನಂದೇ ಎಂದು ರೆಬೆಲ್ ಆಗಿದ್ದ ಸಿ.ಎಂ ಇಬ್ರಾಹಿ ವಿರುದ್ಧ ಜೆಡಿಎಸ್ ವರಿಷ್ಟರು ಶಿಸ್ತು ಕ್ರಮ ಕೈಗೊಂಡಿದ್ದಾರೆ. ಜೆಡಿಎಸ್ ರಾಜ್ಯಾಧ್ಯಕ್ಷ ಸ್ಥಾನದಿಂದ ಸಿ.ಎಂ ಇಬ್ರಾಹಿಂ ಅವರನ್ನು ಉಚ್ಛಾಟನೆ ಮಾಡಿದ್ದು, ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಅವರನ್ನು ನೂತನ ರಾಜ್ಯಾಧ್ಯಕ್ಷರಾಗಿ ನೇಮಕ ಮಾಡಲಾಗಿದೆ.
ಬಿಜೆಪಿ, ಜೆಡಿಎಸ್ ಮೈತ್ರಿ ಮಾತುಕತೆಯ ಬಳಿಕ ಸಿ.ಎಂ ಇಬ್ರಾಹಿಂ ಅವರು ಜೆಡಿಎಸ್ ವರಿಷ್ಠರಿಗೆ ಸೆಡ್ಡು ಹೊಡೆದು ಚಿಂತನ, ಮಂಥನ ಸಭೆ ನಡೆಸಿದ್ದರು. ಇಬ್ರಾಹಿಂ ಅವರ ಈ ನಡೆ ದಳಪತಿಗಳನ್ನ ಕೆರಳಿಸಿದ್ದು, ಇಂದು ರಾಜ್ಯ ಕೋರ್ ಕಮಿಟಿ ಸಭೆ ನಡೆಸಲಾಯಿತು.
ಕೋರ್ ಕಮಿಟಿ ಸಭೆಯಲ್ಲಿ ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ, ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ, ಮಾಜಿ ಸಚಿವ ಜಿ.ಟಿ ದೇವೌಗೌಡ ಸೇರಿದಂತೆ ಹಲವು ಜೆಡಿಎಸ್ ನಾಯಕರು ಭಾಗಿಯಾಗಿದ್ದರು.
ಜೆಡಿಎಸ್ ಕೋರ್ ಕಮಿಟಿಯಲ್ಲಿ ಎಲ್ಲರ ಅಭಿಪ್ರಾಯ ಸಂಗ್ರಹಿಸಿರುವ ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರು ಸಿ.ಎಂ ಇಬ್ರಾಹಿಂ ಅವರನ್ನು ಜೆಡಿಎಸ್ ರಾಜ್ಯಾಧ್ಯಕ್ಷ ಸ್ಥಾನದಿಂದ ಉಚ್ಛಾಟನೆ ಮಾಡೋ ತೀರ್ಮಾನ ಕೈಗೊಂಡಿದ್ದಾರೆ. ಇಬ್ರಾಹಿಂ ಅವರನ್ನು ಉಚ್ಚಾಟನೆ ಮಾಡಿ ನೂತನ ರಾಜ್ಯಾಧ್ಯಕ್ಷರಾಗಿ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ರನ್ನು ನೇಮಿಸಿ ಮಾಜಿ ಪ್ರಧಾನಿ ದೇವೇಗೌಡರು ಅಧಿಕೃತ ಘೋಷಣೆ ಮಾಡಿದ್ದಾರೆ.


























