ಪುತ್ತೂರು : ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಬಪ್ಪಳಿಗೆಯಲ್ಲಿನ ಅಂಬಿಕಾ ವಿದ್ಯಾಲಯ ಸಿಬಿಎಸ್ಇ ಸಂಸ್ಥೆಯ ಆವರಣದಲ್ಲಿರುವ ಶ್ರೀ ಶಂಕರ ಸಭಾಭವನದಲ್ಲಿ ಅಕ್ಟೋಬರ್ 20 ರಂದು ಬೆಳಗ್ಗೆ ಶ್ರೀ ಶಾರದಾ ಪೂಜೆ ಸಂಪನ್ನಗೊಳ್ಳಲಿದೆ. ಆ ಪ್ರಯುಕ್ತ ಎಳೆಯ ಮಕ್ಕಳಿಗೆ ಅಕ್ಷರಾಭ್ಯಾಸ ಕಾರ್ಯಕ್ರಮ ಶಾಸ್ತ್ರೋಕ್ತವಾಗಿ ನಡೆಯಲಿದೆ.
ಹೆತ್ತವರು ತಮ್ಮ ಮಕ್ಕಳಿಗೆ ಅಕ್ಷರಾಭ್ಯಾಸ ಮಾಡಿಸಲು ಬಯಸಿದ್ದಲ್ಲಿ 9071655688 ಅಥವಾ 08251 233488 ಸಂಖ್ಯೆಗೆ ಕರೆಮಾಡಿ ತಮ್ಮ ಆಗಮನವನ್ನು ಖಚಿತಪಡಿಸುವಂತೆ ಸೂಚಿಸಲಾಗಿದೆ. ಕಾರ್ಯಕ್ರಮಕ್ಕೆ ಆಗಮಿಸುವವರು ಭಾರತೀಯ ಉಡುಗೆ – ತೊಡುಗೆಗಳಲ್ಲಿ ಬರುವಂತೆ ಪ್ರಕಟಣೆ ತಿಳಿಸಿದೆ.


























