ಉಪ್ಪಿನಂಗಡಿ : ಮಂಗಳೂರಿಗೆ ಅಕ್ಕಿ ಸಾಗಾಟ ಮಾಡುತ್ತಿದ್ದ ಲಾರಿಯೊಂದು ಬೆಂಕಿಗಾಹುತಿಯಾದ ಘಟನೆ ಹಾಸನದ ಶಿರಾಡಿ ಘಾಟ್‌ನಲ್ಲಿ ನಡೆದಿದೆ.
ಹಾಸನ ಕಡೆಯಿಂದ ಬರುತ್ತಿದ್ದ ಟ್ರಕ್ ಲಾರಿಯು ಶಿರಾಡಿ ಘಾಟ್ ಗೆ ತಲುಪುವಾಗ ಅದರಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಈ ವೇಳೆ ಲಾರಿ ಚಾಲಕ ಹಾಗೂ ಕ್ಲೀನರ್ ಲಾರಿಯನ್ನು ನಿಲ್ಲಿಸಿ ಕೆಳಗಿಳಿದು ಅಪಾಯದಿಂದ ಪಾರಾಗಿದ್ದಾರೆ.

ಪರಿಣಾಮ ಲಾರಿ ಹಾಗೂ ಅದರಲ್ಲಿದ್ದ ಅಕ್ಕಿ ಸಂಪೂರ್ಣ ಸುಟ್ಟು ಹೋಗಿದೆ. ಸ್ಥಳಕ್ಕೆ ಆಗಮಿಸಿದ ಹಾಸನ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ. ಆದರೇ ಲಾರಿ, ಸರಕಿನ ಸಮೇತ ಸುಟ್ಟು ಕರಕಲಾಗಿದ್ದು, ಲಕ್ಷಾಂತರ ರೂಪಾಯಿಗಳ ನಷ್ಟ ಸಂಭವಿಸಿದೆ.


























