ಚಿಕ್ಕಮಗಳೂರು : ಹುಲಿ ಉಗುರಿನ ಉರುಳಲ್ಲಿ ಸಿಲುಕಿ ಅರಣ್ಯಾಧಿಕಾರಿ ಅರೆಸ್ಟ್ ಆದ ಪ್ರಕರಣ ಚಿಕ್ಕಮಗಳೂರು ತಾಲೂಕಿನ ಆಲ್ದೂರುನಲ್ಲಿ ಬೆಳಕಿಗೆ ಬಂದಿದೆ.
ಅರಣ್ಯ ಇಲಾಖೆಯ ಉಪ ವಲಯ ಅರಣ್ಯಾಧಿಕಾರಿ ದರ್ಶನ್ ರನ್ನು ಅಮಾನತುಗೊಂಡ ಬೆನ್ನಲ್ಲೇ ಅರೆಸ್ಟ್ ಮಾಡಿದ್ದಾರೆ.
ಹುಲಿ ಉಗುರು ಧರಿಸಿದ್ದಾರೆ ಎಂದು ದರ್ಶನ್ ವಿರುದ್ಧ ಸೂಕ್ತ ಕ್ರಮಕೈಗೊಳ್ಳಿ ಎಂದು ಲಿಖಿತ ದೂರು ನೀಡಲಾಗಿತ್ತು. ವನ್ಯ ಜೀವಿ ಕಾಯ್ದೆಯಲ್ಲಿ ಪ್ರಕರಣ ದಾಖಲಿಸುವಂತೆ ದೂರು ನೀಡಲಾಗಿತ್ತು. ಆದರೆ ತನಿಖೆಗೆ ಹಾಜರಾಗದ ಹಿನ್ನೆಲೆ ಕೊಪ್ಪ ಡಿ.ಎಫ್.ಓ. ನಂದೀಶ್ ಅವರು ಅಮಾನತು ಆದೇಶ ಹೊರಡಿಸಿದ್ದರು. ಇದಾದ ಬಳಿಕ ಕಳಸದ ಡಿ. ಆರ್.ಎಫ್. ಓ. ದರ್ಶನ್ ಅವರನ್ನು ಅರೆಸ್ಟ್ ಮಾಡಿದ್ದಾರೆ.
ದರ್ಶನ್ ಮೇಲೆ ಅರೆನೂರು ಗ್ರಾಮದ ಸುಪ್ರೀತ್, ಅಬ್ದುಲ್ ಎಂಬುವವರಿಂದ ದೂರು ದಾಖಲಾಗಿತ್ತು.
ಆಲ್ದೂರು ವಲಯ ಅರಣ್ಯಾಧಿಕಾರಿಗೆ ದೂರು ನೀಡಿದ್ದರು. ಆದರೆ ತನಿಖೆ ನಡೆಸಿ ಕ್ರಮ ಕೈಗೊಳ್ಳುವಂತೆ ಲಿಖಿತ ದೂರು ನೀಡಿದ ಹಿನ್ನಲೆ ಮತ್ತು ತನಿಖೆಗೆ ಸಹಕರಿಸದ ಹಿನ್ನೆಲೆ ಡಿ. ಆರ್.ಎಫ್. ಓ. ದರ್ಶನ್ ಅಮಾನತುಗೊಂಡಿದ್ದರು. ಆದರೀಗ ಅವರನ್ನು ಅರೆಸ್ಟ್ ಮಾಡಲಾಗಿದೆ.


























