ಪುತ್ತೂರು : ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್‌ಐಎ ತನಿಖೆಯನ್ನು ತೀವ್ರಗೊಳಿಸಿದ್ದು, ಇದೀಗ ರಿವಾರ್ಡ್ ವಾಂಟೆಡ್ ನೋಟೀಸ್ ರಿಲೀಸ್ ಮಾಡಲಾಗಿದೆ.

ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿ ತಾಲೂಕಿನ ಪಡಂಗಡಿ ಗ್ರಾಮದ ಹಮೀದ್ ಎಂಬವರ ಮಗ ನೌಷದ್, ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲೂಕು ಚೌಡ್ಲಿ ನಿವಾಸಿ ಇಬ್ರಾಹಿಂ ಎಂಬವರ ಮಗ ಅಬ್ದುಲ್ ನಾಸಿರ್ (41), ಕೊಡಗು ಜಿಲ್ಲೆ ಸೋಮವಾರಪೇಟೆ ಹನಗಲ್ಲು ಕಲಕಂದೂರ್ ನಿವಾಸಿ ಅಬ್ದುಲ್ ಖಾದರ್ ಎಂಬವರ ಮಗ ಅಬ್ದುಲ್ ರಹಿಮಾನ್ (36) ಬಗ್ಗೆ ಸುಳಿವು ನೀಡಿದವರಿಗೆ 2 ಲಕ್ಷ ಬಹುಮಾನವನ್ನು ಘೋಷಣೆ ಮಾಡಲಾಗಿದೆ.


ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದಲ್ಲಿ ಇವರೆಲ್ಲರೂ ಶಾಮೀಲಾಗಿದ್ದು, ನಿಷೇಧಿತ ಪಿಎಫ್ಐ ಸಂಘಟನೆಯ ಕಾರ್ಯಕರ್ತರಾಗಿ ಗುರುತಿಸಿಕೊಂಡಿದ್ದರು.

ಘಟನೆ ಬಳಿಕ ಎಲ್ಲರೂ ತಲೆಮರೆಸಿಕೊಂಡಿದ್ದು, ಇನ್ನೂ ಬಂಧನವಾಗಿಲ್ಲ. ಈ ಹಿನ್ನೆಲೆಯಲ್ಲಿ ಇದೀಗ ಆರೋಪಿಗಳ ಬಂಧನಕ್ಕೆ ರಿವಾರ್ಡ್ ವಾಂಟೆಡ್ ನೋಟೀಸ್ ಜಾರಿ ಮಾಡಿದ್ದಾರೆ.

























