ಪುತ್ತೂರು : ಕೆ.ಎಸ್.ಆರ್.ಟಿ.ಸಿ ಬಸ್ ನಲ್ಲಿ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇರೆಗೆ ಮಂಗಳೂರಿನ ವ್ಯಕ್ತಿಯೊಬ್ಬನನ್ನು ಪುತ್ತೂರು ಮಹಿಳಾ ಠಾಣೆ ಪೊಲೀಸರು ಬಂಧಿಸಿ ಪೋಕ್ಸೋ ಪ್ರಕರಣ ದಾಖಲಿಸಿಕೊಂಡ ಘಟನೆ ನಡೆದಿದೆ.
ಉದಯ (40) ಬಂಧಿತ.
ಮಂಗಳೂರಿನಿಂದ ಪುತ್ತೂರಿಗೆ ಬರುತ್ತಿದ್ದ ಕೆ.ಎಸ್.ಆರ್.ಟಿ.ಸಿ ಬಸ್ ನಲ್ಲಿ ಬಾಲಕಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದು, ಈ ಬಗ್ಗೆ ಆಕೆ ಬಸ್ ನಲ್ಲಿದ್ದ ಪ್ರಯಾಣಿಕರಿಗೆ ತಿಳಿಸಿದ್ದು, ಪ್ರಯಾಣಿಕರು ಆತನನ್ನು ಇಳಿಯಲು ಬಿಡದೆ ತಡೆದಿದ್ದರೆನ್ನಲಾಗಿದೆ.
ಬಳಿಕ ಬಸ್ ಅನ್ನು ಪೊಲೀಸ್ ಠಾಣೆಯ ಬಳಿಗೆ ಬಂದು ನಿಲ್ಲಿಸಲಾಯಿತು. ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದುಕೊಂಡರು ಎಂದು ವರದಿಯಾಗಿದೆ.

























