ಪುತ್ತೂರು: ನಗರಸಭೆ ಆಶಾ ಕಾರ್ಯಕರ್ತೆಯರಿಗೆ ಪಲ್ಸ್ ಆಕ್ಸಿಮೀಟರ್ ವಿತರಣೆ ಮೇ 15 ರಂದು ಪುತ್ತೂರು ಪುರಭವನದಲ್ಲಿ ನಡೆಯಿತು.
ಶಾಸಕ ಸಂಜೀವ ಮಠಂದೂರು ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಆಶಾ ಕಾರ್ಯಕರ್ತೆಯರಿಗೆ ಪಲ್ಸ್ ಆಕ್ಸಿಮೀಟರ್, ಕೊಡೆ, ಗ್ಲೌಸ್ ವಿತರಣೆ ಮಾಡಿದರು. ಎಲ್ಲಾ ಧಾರ್ಮಿಕ ಸಂಸ್ಥೆ, ಸಂಘಟನೆಗಳ ಸಹಕಾರ ಪಡೆದುಕೊಂಡು ಕೋವಿಡ್ ಮುಕ್ತ ನಗರಸಭೆ ಮಾಡಬೇಕೆಂದ ಅವರು ಮೇ 16 ರಂದು ಎಕ ದಿನದ ಮನೆ ಮನೆ ಅಭಿಯಾನ ಕಾರ್ಯಕ್ರಮ ಮಾಡಬೇಕೆಂದು ಹೇಳಿದರು.
ನಗರಸಭೆ ಅಧ್ಯಕ್ಷ ಕೆ ಜೀವಂಧರ್ ಜೈನ್, ಉಪಾಧ್ಯಕ್ಷೆ ವಿದ್ಯಾ ಗೌರಿ, ನಗರಯೋಜನಾ ಪ್ರಾಧಿಕಾರದ ಅಧ್ಯಕ್ಷ ಭಾಮಿ ಅಶೋಕ್ ಶೆಣೈ, ಪೌರಾಯುಕ್ತೆ ರೂಪಾ ಶೆಟ್ಟಿ, ತಾಲೂಕು ಆರೋಗ್ಯಾಧಿಕಾರಿ ಡಾ.ಅಶೋಕ್ ರೈ, ನಗರ ಪ್ರಾಥಮಿಕ ವೈದ್ಯಾಧಿಕಾರಿ ಡಾ.ದೀಪಕ್ ರೈ, ನಗರಸಭೆ ಸ್ಥಾಯಿ ಸಮಿತಿ ಅಧ್ಯಕ್ಷೆ ಗೌರಿ ಬನ್ನೂರು, ಡಾ.ಸುಹೈಲಾ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಸಭೆಯಲ್ಲಿ ಆಶಾ ಕಾರ್ಯಕರ್ತರು, ಅಂಗನವಾಡಿ ಕಾರ್ಯಕರ್ತರು, ಬೀಟ್ ಪೊಲೀಸರು ಉಪಸ್ಥಿತರಿದ್ದರು.