ಮಾಣಿ : ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನ 113ನೇ ಮಾಣಿ ಶಾಖೆಯ ಉದ್ಘಾಟನಾ ಸಮಾರಂಭವು ಅ.31 ರಂದು ಶ್ರೀ ಲಕ್ಷ್ಮೀ ನಾರಾಯಣ ಕಾಂಪ್ಲೆಕ್ಸ್ ನ ಪ್ರಥಮ ಅಂತಸ್ತಿನಲ್ಲಿ ನಡೆಯಲಿದೆ.
ನೂತನ ಶಾಖೆಯ ಉದ್ಘಾಟನೆಯನ್ನು ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ್ ರವರು ನೆರವೇರಿಸಲಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿ. ಅಧ್ಯಕ್ಷರಾದ ಸಹಕಾರ ರತ್ನ ಡಾ.ಎಂ.ಎನ್. ರಾಜೇಂದ್ರ ಕುಮಾರ್ ರವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ.
ಪುತ್ತೂರು ಶಾಸಕರಾದ ಅಶೋಕ್ ಕುಮಾರ್ ರೈ ಅವರು ಗಣಕೀಕರಣವನ್ನು ಉದ್ಘಾಟಿಸಿಲಿದ್ದಾರೆ.
ಮಾಜಿ ಸಚಿವ ರಮಾನಾಥ್ ರೈ ಅವರು ನವೋದಯ ಸ್ವಸಹಾಯ ಸಂಘಗಳ ಉದ್ಘಾಟನೆ ನೆರವೇರಿಸಲಿದ್ದಾರೆ.
ಮಾಣಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಇಬ್ರಾಹಿಂ ಕೆ. ರವರು ಸಾಲ ಪತ್ರ ವಿತರಣೆ ಮಾಡಲಿದ್ದಾರೆ.
ನೇರಳಕಟ್ಟೆ ಸಹಕಾರಿ ವ್ಯವಸಾಯಿಕ ಸಂಘದ ಅಧ್ಯಕ್ಷರಾದ ಪುಷ್ಪರಾಜ್ ಚೌಟ ರವರು ಭದ್ರತಾಕೋಶ ಉದ್ಘಾಟಿಸಲಿದ್ದಾರೆ.
ಶಾಖಾ ಕಟ್ಟಡದ ಮಾಲಕರಾದ ಎಮ್. ನಾರಾಯಣ ಪೈ ಸಹಿತ ಹಲವು ಗಣ್ಯರು ಕಾರ್ಯಕ್ರಮದಲ್ಲಿ ಉಪಸ್ಥಿತರಿರಲಿದ್ದಾರೆ..




























