ಬಂಟ್ವಾಳ : ಆಂಬ್ಯುಲೆನ್ಸ್-ಕಾರಿನ ನಡುವೆ ಮುಖಾಮುಖಿ ಡಿಕ್ಕಿಯಾದ ಘಟನೆ ಮಾಣಿ-ಮೈಸೂರು ಹೆದ್ದಾರಿಯ ನೇರಳಕಟ್ಟೆ ಸಮೀಪ ನಡೆದಿದೆ.

ಪುತ್ತೂರಿನಿಂದ ಮಂಗಳೂರಿನ ಆಸ್ಪತ್ರೆಗೆ ರೋಗಿಯೋರ್ವರನ್ನು ಕರೆದುಕೊಂಡು ಹೋಗುತ್ತಿದ್ದ ಆಂಬ್ಯುಲೆನ್ಸ್ ಹಾಗೂ ಮಾಣಿ ಕಡೆಯಿಂದ ಪುತ್ತೂರು ಕಡೆಗೆ ಸಂಚರಿಸುತ್ತಿದ್ದ ಇಂಡಿಕಾ ಕಾರು ಮುಖಾಮುಖಿ ಡಿಕ್ಕಿಯಾಗಿದೆ.
ಅಪಘಾತದಿಂದಾಗಿ ಯಾವುದೇ ಅಪಾಯ ಸಂಭವಿಸಿಲ್ಲ. ಎರಡು ವಾಹನಗಳು ಜಖಂಗೊಂಡಿದೆ.
ಸ್ಥಳಕ್ಕೆ ವಿಟ್ಲ ಠಾಣಾ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.

























