ಉಪ್ಪಿನಂಗಡಿ : ಲಾರಿ ಹಾಗೂ ಬೈಕ್ ನಡುವೆ ನಡೆದ ಅಪಘಾತದಲ್ಲಿ ಬೈಕ್ ಸವಾರ ಮೃತಪಟ್ಟ ಘಟನೆ ನಡೆದಿದ್ದು, ಈ ಬಗ್ಗೆ ಉಪ್ಪಿನಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪುತ್ತೂರು ಬಜತ್ತೂರು ನಿವಾಸಿ, ಲಾರಿ ಚಾಲಕ ಅಬ್ದುಲ್ ರಿಯಾಜ್ ಕೆ. ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಾಗಿದೆ.
ನ.1 ರಂದು ಮೋಟಾರು ಸೈಕಲ್ ಸವಾರ ಸುರೇಂದ್ರ ಮಹತೋ ಎಂಬವರು ಮೋಟಾರು ಸೈಕಲ್ ಅನ್ನು ಕಡಬ ತಾಲೂಕು ಕೌಕ್ರಾಡಿ ಗ್ರಾಮದ ಪಂಚಾಯತ್ ಬಳಿ ಅಜಾಗರೂಕತೆ ಹಾಗೂ ನಿರ್ಲಕ್ಷತನದಿಂದ ಚಲಾಯಿಸಿದ ಪರಿಣಾಮ, ಅಬ್ದುಲ್ ರಿಯಾಜ್ ಕೆ ಎಂಬವರು ಚಾಲಕರಾಗಿ ಚಲಾಯಿಸಿಕೊಂಡು ಹೋಗುತ್ತಿದ್ದ ಲಾರಿಗೆ ಡಿಕ್ಕಿಯಾಗಿರುತ್ತದೆ.
ಅಪಘಾತದ ಪರಿಣಾಮ ರಸ್ತೆಗೆ ಬಿದ್ದ ಸುರೇಂದ್ರ ಮಹತೋ ರವರ ತಲೆಗೆ ಗಂಭೀರ ಗಾಯಗಳಾಗಿದ್ದು, ಚಿಕಿತ್ಸೆಗೆ ಆಂಬುಲೆನ್ಸ್ ಮೂಲಕ ಪುತ್ತೂರು ಸರಕಾರಿ ಆಸ್ಪತ್ರೆಗೆ ಕರೆದುಕೊಂಡು ಹೋದಾಗ ಮೃತಪಟ್ಟಿರುತ್ತಾರೆ ಎಂಬುದಾಗಿ ನೀಡಿದ ದೂರಿನಂತೆ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಅ.ಕ್ರ 152/2023 ಕಲಂ: ಕಲಂ:279, 304 (ಎ) ಐಪಿಸಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.


























