ಉಪ್ಪಿನಂಗಡಿ : ಮಹಿಳೆಯೋರ್ವರ ಜೊತೆ ಅನುಚಿತವಾಗಿ ವರ್ತಿಸಿ, ಹಲ್ಲೆ ನಡೆಸಿರುವ ಬಗ್ಗೆ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಹಿಳೆ ನೀಡಿದ ದೂರಿನ ಮೇರೆಗೆ ಸುರೇಶ, ಉಮೇಶ, ಗಿರೀಶ ಹಾಗೂ ಇನ್ನೋರ್ವನ ವಿರುದ್ಧ ಪ್ರಕರಣ ದಾಖಲಾಗಿದೆ.
ಅ.31 ರಂದು ಮಹಿಳೆಯೋರ್ವರು ತಮ್ಮ ಪತಿಯೊಂದಿಗೆ ಪುತ್ತೂರು ಬಜತ್ತೂರು ಮಣಿಕ್ಕಲ ಎಂಬಲ್ಲಿ ಸಾರ್ವಜನಿಕ ರಸ್ತೆಯಲ್ಲಿ ಹೋಗುತ್ತಿದ್ದಾಗ ಸುರೇಶ, ಉಮೇಶ ಗಿರೀಶ ಹಾಗೂ ಇನ್ನೋರ್ವ ಬಂದು ಮಹಿಳೆಗೆ ಅವ್ಯಾಚವಾಗಿ ಬೈದು ಮರದ ಕೋಲಿನಿಂದ ಹಲ್ಲೆ ನಡೆಸಿದ್ದು, ಮಹಿಳೆಯೊಂದಿಗೆ ಅನುಚಿತವಾಗಿ ವರ್ತಿಸಿರುತ್ತಾರೆ.
ಹಲ್ಲೆಯನ್ನು ತಡೆಯಲು ಬಂದ ಮಹಿಳೆಯ ಪತಿಗೂ ಹಲ್ಲೆ ನಡೆಸಿದ್ದು, ಹಲ್ಲೆಯಿಂದ ಗಾಯಗೊಂಡ ಮಹಿಳೆ ಹಾಗೂ ಅವರ ಪತಿ ಪುತ್ತೂರು ಸರಕಾರಿ ಆಸ್ಪತ್ರೆಯಲ್ಲಿ ದಾಖಲಾಗಿರುವುದಾಗಿ ದೂರಿನಲ್ಲಿ ತಿಳಿಸಿದ್ದಾರೆ.
ಈ ಬಗ್ಗೆ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಅ.ಕ್ರ 151/2023 ಕಲಂ:323,324,354,504 ಜೊತೆಗೆ 34 ಐಪಿಸಿ ಯಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

























