ಪುತ್ತೂರು : ದ.ಕ.ಜಿಲ್ಲಾ ಮಾಸ್ಟರ್ ಅಥ್ಲೆಟಿಕ್ಸ್ ಅಸೋಸಿಯೇಶನ್ನ ಉಪಾಧ್ಯಕ್ಷರಾಗಿ ಸತೀಶ್ ನಡುಬೈಲು ರವರು ಆಯ್ಕೆಯಾಗಿದ್ದಾರೆ.
ನ.1 ರಂದು ಮಂಗಳೂರಿನ ಮಂಗಳಾ ಕ್ರೀಡಾಂಗಣದಲ್ಲಿ ಜರುಗಿದ ಅಸೋಸಿಯೇಶನ್ನ ಮಹಾಸಭೆಯಲ್ಲಿ ನೂತನ ಪದಾಧಿಕಾರಿಗಳ ಆಯ್ಕೆ ನಡೆಯಿತು.
ಉಪಾಧ್ಯಕ್ಷರಾಗಿ ಆಯ್ಕೆಗೊಂಡಿರುವ ಸತೀಶ್ ರೈ ಯವರು ಪುತ್ತೂರು ಸಂತ ಫಿಲೋಮಿನಾ ಕಾಲೇಜಿನ ರಾಷ್ಟ್ರೀಯ ಕ್ರೀಡಾಪಟುವಾಗಿದ್ದರು. ಇವರ ತರಬೇತಿಯಲ್ಲಿ ರಾಜ್ಯ ಮತ್ತು ರಾಷ್ಟ್ರಮಟ್ಟದ ಕ್ರೀಡಾಪಟುಗಳನ್ನು ರೂಪಿಸಿರುತ್ತಾರೆ. ಅಮೆಚೂರ್ ಕಬಡ್ಡಿ ಅಧ್ಯಕ್ಷರಾಗಿದ್ದ ಅವಧಿಯಲ್ಲಿ ಉಡುಪಿ ಮತ್ತು ದ.ಕ. ಜಿಲ್ಲೆಯ ಹಿರಿಯರ ಕ್ರೀಡಾಕೂಟವನ್ನು ಸಂಘಟಿಸಿ ಎರಡು ಜಿಲ್ಲೆಗಳ ಕ್ರೀಡಾಕೂಟ ಪುತ್ತೂರಿನಲ್ಲಿ ಯಶಸ್ವಿಯಾಗಿ ಆಯೋಜಿಸಿದ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.
ಸತೀಶ್ ರೈ ಯವರಿಗೆ ರೋಟರಿ ಸಂಸ್ಥೆಯು ಕ್ರೀಡಾರತ್ನ ಪ್ರಶಸ್ತಿಯನ್ನು ನೀಡಿ ಗೌರವಿಸಿತ್ತು. ಹಲವಾರು ಸಂಘ ಸಂಸ್ಥೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿರುತ್ತಾರೆ. ಇವರು ಪುತ್ತೂರು ಬಂಟಸಿರಿ ವಿವಿಧೋದ್ದೇಶ ಸಹಕಾರ ಸಂಘದ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.


























