ಪುತ್ತೂರು : ಅಖಿಲ ಭಾರತೀಯ ಸಾಹಿತ್ಯ ಪರಿಷತ್‌ನ ಪುತ್ತೂರು ತಾಲೂಕು ಸಮಿತಿ ವತಿಯಿಂದ ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆಯ ಅಂಗವಾಗಿ ರಾಮಾಯಣ – ಋಷಿದರ್ಶನ ಕಾರ್ಯಕ್ರಮ ನವೆಂಬರ್ 4 ರಂದು ಅಪರಾಹ್ನ 1.20ರಿಂದ ತೆಂಕಿಲದ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯಲ್ಲಿ ನಡೆಯಲಿದೆ.
ಶಾಲಾ ಆಡಳಿತ ಮಂಡಳಿ ಸಮಿತಿಯ ಅಧ್ಯಕ್ಷ ರಮೇಶ್ಚಂದ್ರ ನಾಯಕ್ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿಕೊಳ್ಳಲಿದ್ದಾರೆ.
ಅಖಿಲ ಭಾರತೀಯ ಸಾಹಿತ್ಯ ಪರಿಷತ್‌ನ ರಾಜ್ಯ ಸಂಘಟನಾ ಕಾರ್ಯದರ್ಶಿ ನಾರಾಯಣ ಶೇವಿರೆ ಪ್ರವಚನ ನೀಡಲಿದ್ದಾರೆ. ಪುತ್ತೂರಿನ ದ್ವಾರಕಾ ಕನ್ಸ್ಟ್ರಕ್ಷನ್ಸ್ ಪ್ರವರ್ತಕ ಗೋಪಾಲಕೃಷ್ಣ ಭಟ್ಟ ಅರ್ತ್ಯಡ್ಕ ಅಭ್ಯಾಗತರಾಗಿ ಆಗಮಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.


























