ಬೆಂಗಳೂರು : ಅರಮನೆ ಮೈದಾನದಲ್ಲಿ ನ.24,25,26 ರಂದು ನಡೆಯಲಿರುವ ಬೆಂಗಳೂರು ಕಂಬಳದ ಕರೆ ನಿರ್ಮಾಣ ಕಾಮಗಾರಿಯನ್ನು ದ ಕ ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್ ವೀಕ್ಷಣೆ ಮಾಡಿದರು.

ಶುಕ್ರವಾರ ಮಧ್ಯಾಹ್ನ ಅರಮನೆ ಮೈದಾನಕ್ಕೆ ಭೇಟಿ ನೀಡಿದ ಅವರು ಕರೆ ವೀಕ್ಷಣೆ ಮಾಡಿ ಬೆಂಗಳೂರು ಕಂಬಳ ಸಮಿತಿ ಅಧ್ಯಕ್ಷರು, ಪುತ್ತೂರು ಶಾಸಕರಾದ ಅಶೋಕ್ ರೈ ಜೊತೆ ಚರ್ಚೆ ನಡೆಸಿದರು.
ಕಂಬಳ ವೀಕ್ಷಣೆಗೆ ಲಕ್ಷಾಂತರ ಮಂದಿ ಅಭಿಮಾನಿಗಳು ಆಗಮಿಸುವ ನಿರೀಕ್ಷೆ ಇದ್ದು, ಅಲ್ಲಿ ನಡೆಯುತ್ತಿರುವ ಇತರೆ ಕಾಮಗಾರಿಗಳನ್ನು ಸಚಿವರು ಪರಿಶೀಲನೆ ಮಾಡಿದರು.
ಈ ಸಂದರ್ಭದಲ್ಲಿ ಮಾಜಿ ಕಾರ್ಪೋರೇಟರ್ ಉಮೇಶ್ ಶೆಟ್ಟಿ, ಪ್ರಮುಖರಾದ ಗುಣರಂಜನ್ ಶೆಟ್ಟಿ, ಮುರಳೀಧರ್ ರೈ ಮಠಂತಬೆಟ್ಟು ಸೇರಿದಂತೆ ಕಂಬಳ ಸಮಿತಿ ಪ್ರಮುಖರು ಉಪಸ್ಥಿತರಿದ್ದರು.

























